alex Certify ಎಲ್ಲಾ ರೈತರು, ಸಣ್ಣ ವ್ಯಾಪಾರಿಗಳ ಸಾಲ ಮನ್ನಾ; ಸಂಕಷ್ಟದಲ್ಲಿರುವ ಕುಟುಂಬಗಳಿಗೆ 25 ಸಾವಿರ ರೂ.; ಪ್ರಿಯಾಂಕಾ ಗಾಂಧಿ ಭರವಸೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಲ್ಲಾ ರೈತರು, ಸಣ್ಣ ವ್ಯಾಪಾರಿಗಳ ಸಾಲ ಮನ್ನಾ; ಸಂಕಷ್ಟದಲ್ಲಿರುವ ಕುಟುಂಬಗಳಿಗೆ 25 ಸಾವಿರ ರೂ.; ಪ್ರಿಯಾಂಕಾ ಗಾಂಧಿ ಭರವಸೆ

ಅಮೇಥಿ: ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೇರುವ ನಿಟ್ಟಿನಲ್ಲಿ ಈಗಾಗಲೇ ಪ್ರಚಾರ ಆರಂಭಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭರಪೂರ ಭರವಸೆ ನೀಡತೊಡಗಿದ್ದಾರೆ.

ಅಮೇಥಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಕಾಂಗ್ರೆಸ್ ಎಲ್ಲಾ ರೈತರು ಮತ್ತು ಸಣ್ಣ ಉದ್ಯಮಿಗಳ ಸಾಲವನ್ನು ಮನ್ನಾ ಮಾಡಲಿದೆ ಎಂದು ತಿಳಿಸಿದ್ದಾರೆ.

ಅರ್ಧದಷ್ಟು ವಿದ್ಯುತ್ ಬಿಲ್‌ ಕಡಿತ ಮಾಡಲಾಗುವುದು. 20 ಲಕ್ಷ ಯುವಕರಿಗೆ ಉದ್ಯೋಗ ಒದಗಿಸಲಾಗುವುದು. ಮತ್ತು ಕೋವಿಡ್‌ ಸಂಕಷ್ಟದಿಂದ ಬಳಲುತ್ತಿರುವ ಎಲ್ಲಾ ಕುಟುಂಬಗಳಿಗೆ 25,000 ರೂ. ನೀಡಲಾಗುವುದು ಎಂದು ಹೇಳಿದ್ದಾರೆ. ಈ ಸರ್ಕಾರ ನಿಮ್ಮನ್ನು ದಾರಿ ತಪ್ಪಿಸಿದೆ, ಕಾಂಗ್ರೆಸ್ ಬೆಂಬಲಿಸಿ ಎಂದು ಅವರು ಮನವಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...