alex Certify ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯನ್ನು ವಿಸರ್ಜನೆ ಮಾಡುವ ಮೂಲಕ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಡ್ಯಾಮೇಜ್ ಕಂಟ್ರೋಲ್ ಗೆ ಪ್ರಯತ್ನ ನಡೆಸಿರುವ ಬೆನ್ನಲ್ಲೇ, ಇದೇ ಮೊದಲ ಬಾರಿಗೆ ಪಠ್ಯ ಪರಿಷ್ಕರಣೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಈ ಬಗ್ಗೆ ಕನ್ನಡದಲ್ಲಿಯೇ ಸರಣಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಾಜ್ಯ ಅಸ್ಮಿತೆಗೆ ವಿರುದ್ಧವಾದ ಸಂದೇಶಗಳನ್ನು ಮಕ್ಕಳಿಗೆ ಕಲಿಸಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾವನ ಮನೆ ಮುಂದೆ ನವ ವಧುವಿನ ಸಖತ್ ಡಾನ್ಸ್….!

“ಕರ್ನಾಟಕದ ಬಹುತ್ವಕ್ಕೆ ಮಾರಕವಾದ ಪಠ್ಯವನ್ನು ಮಕ್ಕಳ ಮೇಲೆ ಹೇರಲು ಕಾಂಗ್ರೆಸ್ ಬಿಡುವುದಿಲ್ಲ. ಕನ್ನಡ ನಾಡು, ನುಡಿ ಮತ್ತು ಸಾಹಿತಿಗಳ ರಕ್ಷಣೆಗೆ ಕಾಂಗ್ರೆಸ್ ಪಕ್ಷ ಸದಾ ಬದ್ಧವಾಗಿದೆ’’ ಎಂದು ತಮ್ಮ ಕನ್ನಡದ ಟ್ವೀಟ್ ನಲ್ಲಿ ರಾಹುಲ್ ಗಾಂಧಿ ಹೇಳಿದ್ದಾರೆ.

“ಕರ್ನಾಟಕದ ಜನ ಸದಾ ಸಾಮಾಜಿಕ ನ್ಯಾಯ, ಮಹನೀಯರ ಏಕತೆ ಹಾಗೂ ಮಾನವತಾವಾದದ ತತ್ತ್ವಗಳನ್ನು ಪಾಲಿಸಿಕೊಂಡು ಬಂದಿದ್ದಾರೆ. ಡಾ.ಬಿ.ಆರ್. ಅಂಬೇಡ್ಕರ್, ಬುದ್ಧ-ಬಸವಣ್ಣ, ನಾರಾಯಣ ಗುರು, ಕುವೆಂಪು ಮುಂತಾದ ಅನೇಕ ಮಹನೀಯರ ಜೀವನಕ್ಕೆ ಹಾಗೂ ಕರ್ನಾಟಕದ ಅಸ್ಮಿತೆಗೆ ವಿರುದ್ಧವಾದ ಸಂದೇಶಗಳನ್ನು ಪಠ್ಯ ಪುಸ್ತಕದ ಮೂಲಕ ಮಕ್ಕಳಿಗೆ ಕಲಿಸಲು ಬಿಜೆಪಿ ಹೊರಟಿದೆ’’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ನ್ಯಾಯ, ಪ್ರಾದೇಶಿಕತೆ ಮತ್ತು ಲಿಂಗ ಸಮಾನತೆ ಸಾರುವ ಪಾಠಗಳನ್ನು, ಲೇಖಕರನ್ನು ಹೊರಗಿಟ್ಟು ಮಕ್ಕಳಿಗೆ ಕೇಸರೀಕರಣದ ಪಾಠ ಹೇಳಲು ಹೊರಟಿರುವುದು ವೈವಿಧ್ಯತೆಯ ತೊಟ್ಟಿಲಾಗಿರುವ ಭಾರತಕ್ಕೆ ಮಾಡುವ ಅಪಮಾನ ಎಂದೂ ಅವರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...