
ಚಂಡೀಗಢ: ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರ ಶವ ಬಸ್ ನಿಲ್ದಾಣ ಬಳಿ ಪತ್ತೆಯಾಗಿರುವ ಸೂಟ್ ಕೇಸ್ ವೊಂದರಲ್ಲಿ ಪತ್ತೆಯಾಗಿದ್ದು, ಭಾರಿ ಚರ್ಚೆಗೆ ಕಾರಣವಾಗಿದೆ.
22 ವರ್ಷದ ಹಿಮಾನಿ ನರ್ವಾಲ್ ಕೊಲೆಯಾಗಿರುವ ಕಾಂಗ್ರೆಸ್ ಕಾರ್ಯಕರ್ತೆ. ಹರಿಯಾಣದ ರೋಹ್ಟಕ್ ಜಿಲ್ಲೆಯ ಬಸ್ ನಿಲ್ದಾಣ ಬಳಿ ಸೂಟ್ ಕೇಸ್ ವೊಂದನ್ನು ಕಂಡ ಸರವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸೂಟ್ ಕೆಸ್ ತೆಗೆದು ಪರಿಶೀಲಿಸಿದಾಗ ಮಹಿಳೆಯ ಶವ ಪತ್ತೆಯಾಗಿದೆ. ತನಿಖೆ ವೇಳೆ ಇದು ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ಎಂಬುದು ತಿಳಿದುಬಂದಿದೆ.
ಹಿಮಾನಿ ನರ್ವಾಲ್, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದರು. ಹಿಮಾನಿ ಸಾವಿನ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಕಾಂಗ್ರೆಸ್ ಆಗ್ರಹಿಸಿದೆ.