
ಚಂಡೀಗಢ: ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ತನಿಖೆಗೆ ಸರ್ಕಾರ ಎಸ್ಐಟಿ ರಚನೆ ಮಾಡಿದ್ದು, ತನಿಖೆ ವೇಳೆ ಎಸ್ಐಟಿ ಅಧಿಕಾರಿಗಳು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಕೊಲೆಗಾರನ ಬಂಧನವಾಗುವವರೆಗೂ ಹಿಮಾನಿ ಅಂತ್ಯಸಂಸ್ಕಾರ ಮಾಡಲ್ಲ ಎಂದು ಹಿಮಾನಿ ಕುಟುಂಬದವರು ಪಟ್ಟು ಹಿಡಿದಿದ್ದಾರೆ. ಈ ನಡುವೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಹರಿಯಾಣದ ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಅವರ ಶವ ಬಸ್ ನಿಲ್ದಾಣ ಬಳಿಯ ಸೂಟ್ ಕೇಸ್ ವೊಂದರಲ್ಲಿ ಪತ್ತೆಯಾಗಿತ್ತು. ಫೆ.27ರಂದು ಹಿಮಾನಿ ಜೊತೆ ಅವರ ತಾಯಿ ದೂರವಾಣಿಯಲ್ಲಿ ಮಾತನಾಡಿದ್ದರಂತೆ ಪಕ್ಷದ ಕೆಲಸದಲ್ಲಿ ತೊಡಗಿರುವುದಾಗಿ ಹೇಳಿದ್ದರಂತೆ. ಕೆಲ ಹೊತ್ತಿನ ಬಳಿಕ ಅವರ ಫೋನ್ ಸ್ವಿಚ್ ಆಫ್ ಆಗಿದೆ ಎಂದು ಅವರ ತಾಯಿ ಕಣ್ಣೀರಿಟ್ಟಿದ್ದಾರೆ.
ಸದ್ಯ ಓರ್ವ ಆರೋಪಿ ಬಂಧನವಾಗಿದ್ದು, ತನಿಖೆ ಮುಂದುವರೆದಿದೆ.