ಕಾಂಗ್ರೆಸ್ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆಗೈದು, ಮರಕ್ಕೆ ನೇತುಹಾಕಿದ ದುಷ್ಕರ್ಮಿಗಳು

ಗದಗ: ಕಾಂಗ್ರೆಸ್ ಕಾರ್ಯಕರ್ತರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿ ಬಳಿಕ ಮರಕ್ಕೆ ನೇತು ಹಾಕಿರುವ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಡಂಬಳ ಹೋಬಳಿ ಬಳಿ ನಡೆದಿದೆ.

ಡಂಬಳದಲ್ಲಿ ಕಾಂಗ್ರೆಸ್ ಗ್ಯಾರಂಟಿ ಸಮಾವೇಶ ನಡೆಯುತ್ತಿರುವ ಸಂದರ್ಭದಲ್ಲಿಯೇ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಅನುಮಾನಕ್ಕೆ ಕಾರಣವಾಗಿದೆ. ಡಂಬಳ ಗ್ರಾಮದ ಬಳಿ ಕಾರ್ಯಕರ್ತನನ್ನು ಹತ್ಯೆ ಮಾಡಿ, ಮೃತದೇಹವನ್ನು ಮರಕ್ಕೆ ತೂಗಿಹಾಕಿದ್ದಾರೆ. ದೋಣಿ ಗ್ರಾಮದ ಶರಣಪ್ಪ ಸಂದಿಗೌಡ್ರ ಕೊಲೆಯಾದ ವ್ಯಕ್ತಿ.

ಹತ್ಯೆಗೂ ಮುನ್ನ ದುಷ್ಕರ್ಮಿಗಳು ಶರಣಪ್ಪನನ್ನು ಅಟ್ಟಾಡಿಸಿಕೊಂಡು ಹೋಗಿದ್ದಾರೆ. ಬಳಿಕ ಕಣ್ಣಿಗೆ ಖಾರದಪುಡಿ ಎರಚಿ ಹಲ್ಲೆ ನಡೆಸಿದ್ದು, ಬಳಿಕ ಕೊಲೆ ಮಾಡಿ ಶವವನ್ನು ಮರಕ್ಕೆ ತೂಗಿ ಹಾಕಿದ್ದಾರೆ.

ಮರದಲ್ಲಿ ಶವ ನೇತಾಡುತ್ತಿರುವುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read