ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಹ್ಯಾರಿಸ್ ಅವರನ್ನು ಎಸ್ಐಟಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ.
ಇಂದು ಸಿಐಡಿ ಕಚೇರಿಯಲ್ಲಿ ಎರಡು ಗಂಟೆಗೂ ಅಧಿಕ ಕಾಲ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರ ವಿಚಾರಣೆ ನಡೆಸಲಾಗಿದೆ. ಬಿಟ್ ಕಾಯಿನ್ ಪ್ರಕರಣದ ಆರೋಪಿ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಗೆ ಶ್ರೀಕಿಗೆ ನಲಪಾಡ್ ಆಪ್ತರಾಗಿದ್ದು, ಬೆಂಗಳೂರಿನ ಕಾಟನ್ ಪೇಟೆ ಹ್ಯಾಕಿಂಗ್ ಪ್ರಕರಣದಲ್ಲಿ ಶ್ರೀಕಿ ಜೊತೆಗೆ ವ್ಯವಹಾರ ಸಂಬಂಧದ ಶಂಕೆ ಮೇರೆಗೆ ನಲಪಾಡ್ ವಿಚಾರಣೆ ನಡೆಸಲಾಗಿದೆ.