ಬೆಂಗಳೂರು: ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಆಯ್ಕೆ, ವಿಪಕ್ಷ ನಾಯಕನ ಆಯ್ಕೆ ವಿಳಂಬ ಹಾಗೂ ಹಲವರು ಪಕ್ಷ ತೊರೆದು ಕಾಂಗ್ರೆಸ್ ನತ್ತ ಮುಖ ಮಾಡುತ್ತಿರುವ ವಿಚಾರವಾಗಿ ರಾಜ್ಯ ಬಿಜೆಪಿಯನ್ನು ಟೀಕಿಸಿರುವ ಕಾಂಗ್ರೆಸ್, ಚುನಾವಣೆ ಬಳಿಕ ಬಿಜೆಪಿ ಸ್ಥಿತಿ ಬಿರುಗಾಳಿಗೆ ಸಿಲುಕಿದ ನಾವಿಕನಿಲ್ಲದ ನೌಕೆಯಂತಾಗಿದೆ ಎಂದು ವ್ಯಂಗ್ಯವಾಡಿದೆ.
ಸ್ವಪಕ್ಷ ನಾಯಕರೇ ಒಬ್ಬರಿಗೊಬ್ಬರು ದ್ವೇಷದ ಹಗೆ ಸಾಧಿಸುತ್ತಿದ್ದಾರೆ. ಒಂದೆಡೆ ಒಬ್ಬರಿಗೊಬ್ಬರು ಹತ್ಯೆಗೆ ಷಡ್ಯಂತ್ರ ರೂಪಿಸುವವರು, ಮತ್ತೊಂದೆಡೆ ಒಬ್ಬರಿಗೊಬ್ಬರು ರಾಜಕೀಯವಾಗಿ ಸಮಾಧಿ ತೋಡುವವರು, ಇನ್ನೊಂದೆಡೆ ಒಳಗೊಳಗೇ ಕುದಿಯುವವರು…
ಮಾಜಿ ಸಚಿವ ಎಸ್.ಟಿ.ಸೋಮಶೇಖರ್, ಪಿತೂರಿಗಾರರ ಬಗ್ಗೆ ದೂರು ನೀಡಿದರು ಕ್ರಮ ಕೈಗೊಂಡಿಲ್ಲ ಎಂದು ಗೋಳಾಡುತ್ತಿದ್ದಾರೆ. ಕ್ರಮ ತೆಗೆದುಕೊಳ್ಳಬೇಕಾದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು, ಅವಧಿ ಮೀರಿದ ಔಷಧಿಯಂತೆ ನಿರುಪಯೋಗಿ ಆಗಿದ್ದಾರೆ. ಶಾಡೋ ಅಧ್ಯಕ್ಷ ಪ್ರಹ್ಲಾದ್ ಜೋಶಿ ಅವರು ನಾಪತ್ತೆಯಾಗಿದ್ದಾರೆ. ರಾಜ್ಯ ಬಿಜೆಪಿಯ ಆಂತರಿಕ ಕಲಹ ನಿಭಾಯಿಸಲು ಒಬ್ಬ ರಾಜ್ಯಾಧ್ಯಕ್ಷ, ಸರ್ಕಾರವನ್ನು ಎದುರಿಸಲು ಒಬ್ಬ ವಿಪಕ್ಷ ನಾಯಕ ಸಿಗದಷ್ಟು ಬಿಜೆಪಿ ರಾಜಕೀಯವಾಗಿ ದಿವಾಳಿಯಾಗಿದೆಯೇ? ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕಾಲೆಳೆದಿದೆ.