alex Certify BIG NEWS: ʼಭಾರತ್‌ ಜೋಡೋʼ ಯಾತ್ರೆಯಲ್ಲಿ ಸಾಗುತ್ತಿದ್ದಾಗಲೇ ಕುಸಿದುಬಿದ್ದು ಕಾಂಗ್ರೆಸ್‌ ಮುಖಂಡನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ʼಭಾರತ್‌ ಜೋಡೋʼ ಯಾತ್ರೆಯಲ್ಲಿ ಸಾಗುತ್ತಿದ್ದಾಗಲೇ ಕುಸಿದುಬಿದ್ದು ಕಾಂಗ್ರೆಸ್‌ ಮುಖಂಡನ ಸಾವು

ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ ವೇಳೆಯೇ ಪಕ್ಷದ ನಾಯಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದು ರಾಹುಲ್ ಗಾಂಧಿ ಮೃತ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಮಂಗಳವಾರ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಯಲ್ಲಿ ಸಾಗುತ್ತಿದ್ದಾಗ 75 ವರ್ಷದ ಕೃಷ್ಣ ಕುಮಾರ್ ಪಾಂಡೆ ಹೃದಯಾಘಾತವಾಗಿ ಮೃತಪಟ್ಟರು. ಅವರು ಕಾಂಗ್ರೆಸ್ ಸೇವಾದಳದ ಪ್ರಧಾನ ಕಾರ್ಯದರ್ಶಿಯಾಗಿದ್ದರು.

ಯಾತ್ರೆಯ ನೇತೃತ್ವ ವಹಿಸಿರುವ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕೃಷ್ಣಕುಮಾರ್ ಪಾಂಡೆಗೆ ಶ್ರದ್ಧಾಂಜಲಿ ಸಲ್ಲಿಸಿದರು. ದೇಶಕ್ಕಾಗಿ ಕೃಷ್ಣ ಕುಮಾರ್ ಪಾಂಡೆ ಅವರ ಸಮರ್ಪಣೆ ಕಾಂಗ್ರೆಸ್ ಕಾರ್ಯಕರ್ತರಿಗೆ ಸ್ಫೂರ್ತಿ ನೀಡುತ್ತದೆ ಎಂದು ಹೇಳಿದರು. ಮೃತ ಪಾಂಡೆ ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದ ರಾಹುಲ್ ಗಾಂಧಿ ಅವರು ತಮ್ಮ ಕೊನೆಯ ಕ್ಷಣಗಳಲ್ಲಿ ರಾಷ್ಟ್ರಧ್ವಜವನ್ನು ಹಿಡಿದಿದ್ದರು ಎಂದು ಹೇಳಿದರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ನಾಯಕನ ನಿಧನದಿಂದ ಆಘಾತಕ್ಕೊಳಗಾಗಿದ್ದೇನೆ ಮತ್ತು ಅಂತಹ ಸಮರ್ಪಿತ ನಾಯಕನನ್ನು ಕಳೆದುಕೊಂಡಿರುವುದು ಪಕ್ಷಕ್ಕೆ ಭರಿಸಲಾಗದ ನಷ್ಟ ಎಂದು ಹೇಳಿದರು.

ಇದಕ್ಕೂ ಮುನ್ನ, ಹಿರಿಯ ಕಾಂಗ್ರೆಸ್ ನಾಯಕ ಮತ್ತು ಪಕ್ಷದ ಸಂವಹನ ಉಸ್ತುವಾರಿ ಜೈರಾಮ್ ರಮೇಶ್ ಟ್ವಿಟರ್‌ನಲ್ಲಿ ದುರದೃಷ್ಟಕರ ಸುದ್ದಿಯನ್ನು ಹಂಚಿಕೊಂಡಿದ್ದರು.

ಭಾರತ್ ಜೋಡೋ ಯಾತ್ರೆಯ ಈ 62 ನೇ ದಿನದಂದು ಬೆಳಿಗ್ಗೆ, ಸೇವಾದಳದ ಪ್ರಧಾನ ಕಾರ್ಯದರ್ಶಿ ಕೃಷ್ಣ ಕುಮಾರ್ ಪಾಂಡೆ ಅವರು ರಾಷ್ಟ್ರಧ್ವಜವನ್ನು ಹಿಡಿದುಕೊಂಡು ದಿಗ್ವಿಜಯ್ ಸಿಂಗ್ ಮತ್ತು ನನ್ನೊಂದಿಗೆ ನಡೆಯುತ್ತಿದ್ದರು. ಕೆಲವು ನಿಮಿಷಗಳ ನಂತರ ಅಭ್ಯಾಸದಂತೆ ಅವರು ಸಹೋದ್ಯೋಗಿಗೆ ಧ್ವಜವನ್ನು ಕೊಟ್ಟು ಹಿಂದೆ ಸರಿದರು. ನಂತರ ಅವರು ಕುಸಿದುಬಿದ್ದರು ಎಂದು ಟ್ವೀಟ್ ಮಾಡಿದ್ದಾರೆ.

ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಉಳಿಸಲಾಗಲಿಲ್ಲ ಎಂದು ಜೈರಾಂ ರಮೇಶ್ ತಿಳಿಸಿದ್ದಾರೆ. ಅವರು ಕಟ್ಟಾ ಕಾಂಗ್ರೆಸಿಗರಾಗಿದ್ದರು ಮತ್ತು ನಾಗಪುರದಲ್ಲಿ ಆರ್‌ಎಸ್‌ಎಸ್ ಅನ್ನು ಎದುರಿಸುತ್ತಿದ್ದರು ಎಂದರು.

ರಾಹುಲ್ ಗಾಂಧಿ ನೇತೃತ್ವದ 3,570 ಕಿಮೀ ಯಾತ್ರೆಯು ತಮಿಳುನಾಡಿನ ಕನ್ಯಾಕುಮಾರಿಯಿಂದ ಜಮ್ಮು ಮತ್ತು ಕಾಶ್ಮೀರದ ಶ್ರೀನಗರಕ್ಕೆ ಪ್ರಾರಂಭವಾದ ಎರಡು ತಿಂಗಳ ನಂತರ ಮಹಾರಾಷ್ಟ್ರವನ್ನು ಪ್ರವೇಶಿಸಿದೆ. ಈಗಾಗಲೇ ತಮಿಳುನಾಡು, ಕೇರಳ, ಕರ್ನಾಟಕ ಮತ್ತು ತೆಲಂಗಾಣದಲ್ಲಿ ಮೆರವಣಿಗೆ ಮುಗಿಸಿದೆ.

ಈ ಯಾತ್ರೆಯು 2024 ರ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ಬಿಜೆಪಿಗೆ ಅಸಾಧಾರಣ ಸವಾಲನ್ನು ಒಡ್ಡಲು ಮತ್ತು ಬೆಂಬಲವನ್ನು ಸಂಗ್ರಹಿಸಲು ಕಾಂಗ್ರೆಸ್‌ನ ಪ್ರಯತ್ನವಾಗಿದೆ.

ಮಹಾರಾಷ್ಟ್ರದಲ್ಲಿ ಪಕ್ಷದ ಮಿತ್ರಪಕ್ಷಗಳಾದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಮತ್ತು ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಯಾತ್ರೆಗೆ ಸೇರಲು ಕಾಂಗ್ರೆಸ್ ಆಹ್ವಾನಿಸಿದೆ.

— Jairam Ramesh (@Jairam_Ramesh) November 8, 2022

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...