alex Certify ಖ್ಯಾತ ನಟಿ ಜಾಕ್ವೆಲಿನ್ ಜೊತೆಗಿನ ಸಂಬಂಧ ಒಪ್ಪಿಕೊಂಡ ಸುಖೇಶ್, ಅದು ವೈಯಕ್ತಿಕ ವಿಚಾರ ಎಂದು ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖ್ಯಾತ ನಟಿ ಜಾಕ್ವೆಲಿನ್ ಜೊತೆಗಿನ ಸಂಬಂಧ ಒಪ್ಪಿಕೊಂಡ ಸುಖೇಶ್, ಅದು ವೈಯಕ್ತಿಕ ವಿಚಾರ ಎಂದು ಹೇಳಿಕೆ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿ ಸುಖೇಶ್ ಚಂದ್ರಶೇಖರ್ ತಾನು ನಟಿ ಜಾಕ್ವಲಿನ್ ಫರ್ನಾಂಡೀಸ್ ಜೊತೆಗೆ ಸಂಬಂಧ ಹೊಂದಿರುವುದನ್ನು ಒಪ್ಪಿಕೊಂಡಿದ್ದಾನೆ.

ನಾನು ಮೊದಲು ಜಾಕ್ವೆಲಿನ್ ಫರ್ನಾಂಡಿಸ್ ಜೊತೆಗೆ ಸಂಬಂಧ ಹೊಂದಿದ್ದು ನಿಜ. ಆದರೆ, ಅದು ವೈಯಕ್ತಿಕ ವಿಚಾರವಾಗಿದೆ ಎಂದು ಸುಖೇಶ್ ಚಂದ್ರಶೇಖರ್ ಹೇಳಿದ್ದು, ಅವರ ಪರವಾಗಿ ಪರ ವಕೀಲ ಅನಂತ್ ಮಲ್ಲಿಕ್ ಪ್ರಕಟಣೆ ನೀಡಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪಾತ್ರದಲ್ಲಿ ಜಾಕ್ವಲಿನ್ ಫರ್ನಾಂಡೀಸ್ ಪಾತ್ರವಿಲ್ಲ ಎಂದು ಸುಖೇಶ್ ಸ್ಪಷ್ಟಪಡಿಸಿದ್ದಾರೆ. ಪ್ರಕರಣದಲ್ಲಿ ನಾನಿನ್ನೂ ಆರೋಪಿತನಾಗಿದ್ದೇನೆ ಹೊರತೂ ಅಪರಾಧಿಯಲ್ಲ. ತನಿಖಾ ಸಂಸ್ಥೆಗಳು ಸರಿಯಾಗಿ ತನಿಖೆ ನಡೆಸಲಿಲ್ಲ. ಪ್ರಕರಣದ ಮೇಲೆ ನನ್ನ ವೈಯಕ್ತಿಕ ಸಂಬಂಧ ಯಾವುದೇ ಪರಿಣಾಮ ಬೀರುವುದಿಲ್ಲ. ಜೈಲು ಅಧಿಕಾರಿಗಳಿಂದ ಒತ್ತಡ ಮತ್ತು ಸುಲಿಗೆ ಮಾಡಲಾಗುತ್ತಿದೆ. ಸಂಬಂಧಿತ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಇಡಿ ಆಸ್ತಿ ಜಪ್ತಿ ಮಾಡಿದೆ. ಇದರ ವಿರುದ್ಧ ನ್ಯಾಯಾಲಯದ ಮೊರೆ ಹೋಗುವುದಾಗಿ ಸುಖೇಶ್ ಚಂದ್ರಶೇಖರ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...