ಬೆಂಗಳೂರು : ನಿಗಮ ಮಂಡಳಿಗಳ ಹಂಚಿಕೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡದ ಹಿನ್ನೆಲೆ ಶಾಸಕರಿಗೆ ನಿರಾಸೆಯಾಗಿದೆ.
ಹೌದು. ನಿಗಮ ಮಂಡಳಿಗಳ ಹಂಚಿಕೆಗೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದರು. ಅಲ್ಲಿ ಹೈಕಮಾಂಡ್ ನಾಯಕರ ಜೊತೆ ಸಭೆ ನಡೆದಿದ್ದು, ಇಬ್ಬರ ನಡುವೆ ಒಮ್ಮತವಿಲ್ಲದ ಹಿನ್ನೆಲೆಯಲ್ಲಿ ಹೈಕಮಾಂಡ್ ನಾಯಕರು ಗ್ರೀನ್ ಸಿಗ್ನಲ್ ನೀಡಲಿಲ್ಲ. ಈ ಮೂಲಕ ನಿಗಮ ಮಂಡಳಿ ನಿರೀಕ್ಷೆಯಲ್ಲಿದ್ದ ಶಾಸಕರಿಗೆ ನಿರಾಸೆಯಾಗಿದೆ.
30 ಕ್ಕೂ ಹೆಚ್ಚು ಶಾಸಕರಿಗೆ ನಿಗಮ ಮಂಡಳಿ ಹಂಚಿಕೆ ಮಾಡಬೇಕೆಂದು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದರು. ಶಾಸಕರಿಗೆ ಅರ್ಧ ಭಾಗ ಕೊಟ್ಟರೆ ಕಾರ್ಯಕರ್ತರನ್ನು, ಮುಖಂಡರನ್ನು ಸಮಾಧಾನ ಮಾಡುವುದು ಹೇಗೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದರು. ಇಬ್ಬರ ನಡುವೆ ಒಮ್ಮತವಿಲ್ಲದ ಹಿನ್ನೆಲೆಯಲ್ಲಿ ಹೈಕಮಾಂಡ್ ನಾಯಕರು ಗ್ರೀನ್ ಸಿಗ್ನಲ್ ನೀಡಲಿಲ್ಲ ಎಂದು ಹೇಳಲಾಗಿದ್ದು, ಈ ಮೂಲಕ ನಿಗಮ ಮಂಡಳಿ ನಿರೀಕ್ಷೆಯಲ್ಲಿದ್ದ ಶಾಸಕರಿಗೆ ನಿರಾಸೆಯಾಗಿದೆ.