
ಹಾಸನ: 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷ ಪ್ರೊ. ದೊಡ್ಡರಂಗೇಗೌಡ ಅವರು ಸಂವಿಧಾನ ತಿದ್ದುಪಡಿ ಅನಿವಾರ್ಯ ಎಂದು ಹೇಳಿದ್ದಾರೆ.
ಅಂಬೇಡ್ಕರ್ ಸಂವಿಧಾನದ ಕೆಲವು ಕಾನೂನು 2021ಕ್ಕೆ ಪ್ರಸ್ತುತವಲ್ಲ. ಹಾಗಾಗಿ ತಿದ್ದುಪಡಿ ಅನಿವಾರ್ಯ ಎಂದು ಹಾಸನ ಜಿಲ್ಲಾ 19 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಹೇಳಿದ್ದಾರೆ.
ಹೊಸ ಕಾಲಕ್ಕೆ ತಕ್ಕಂತೆ ಸಂವಿಧಾನ ಬರೆಯುವ ಪ್ರಯತ್ನ ಮಾಡುವುದಾದರೆ ಅದಕ್ಕಿಂತ ದೊಡ್ಡ ಕೆಲಸ ಮತ್ತೊಂದಿಲ್ಲ. ಸರ್ವರಿಗೆ ಸಮಪಾಲು, ಸಮಬಾಳು ಸಾಧ್ಯವಾಗಬೇಕು. ಈ ನಿಟ್ಟಿನಲ್ಲಿ ಪ್ರಯತ್ನ ಪ್ರಧಾನಿ ಮೋದಿ ಇಂತಹ ಪ್ರಯತ್ನವನ್ನು ಮಾಡಬೇಕು ಎಂದು ಹೇಳಿದ್ದಾರೆ.