ಬೆಂಗಳೂರು: ಭಾರತದ ಸಂವಿಧಾನ ಜಾರಿಯಾಗಿ 75ನೇ ವರ್ಷ ನಡೆಯುತ್ತಿರುವುದರಿಂದ ಸಂವಿಧಾನ ಬಗ್ಗೆ ಜಾಗೃತಿ ಮೂಡಿಸಲು ಫೆಬ್ರವರಿ 23ರ ವರೆಗೆ 31 ಜಿಲ್ಲೆಗಳಲ್ಲಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಫೆಬ್ರವರಿ 24, 25 ರಂದು ಎರಡು ದಿನ ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಷ್ಟ್ರೀಯ ಏಕತಾ ಸಮಾವೇಶ ಆಯೋಜಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.
ಈಗಾಗಲೇ ಜನವರಿ 26 ರಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಸಂವಿಧಾನ ಜಾಗೃತಿ ಜಾಥಾ ನಡೆಸಲಾಗುತ್ತಿದೆ. 24, 25 ರಂದು ಬೆಂಗಳೂರಿನಲ್ಲಿ ಏಕತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಡಾ.ಗಣೇಶ್ ದೇವಿ, ಪ್ರೊ. ಅಸುತೋಶ್ ವರ್ತನಿ, ಪ್ರೊ. ಜಯಂತಿ ಘೋಷ್, ಪ್ರೊ. ಸುಖ್ ದೇವ್ ಥೋರಟ್, ಮೇಧಾ ಪಾಟ್ಕರ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.