ಬೆಂಗಳೂರು : ಸಂವಿಧಾನ ನಮಗೆ ಭಗವದ್ಗೀತೆ ಇದ್ದಂತೆ, ಬಿಜೆಪಿಯವರು ಬದಲಾಯಿಸುವ ಮಾತನಾಡ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ದೇವನಹಳ್ಳಿಯಲ್ಲಿ ಇಂದು ಹಮ್ಮಿಕೊಂಡಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಗ್ಯಾರಂಟಿ ಫಲಾನುಭವಿಗಳ ಸಮಾವೇಶವನ್ನು ಮುಖ್ಯಮಂತ್ರಿಗಳೊಂದಿಗೆ ಉದ್ಘಾಟಿಸಿ ಮಾತನಾಡಿದರು.
ಸಂವಿಧಾನ ನಮಗೆ ಭಗವದ್ಗೀತೆ ಇದ್ದಂತೆ. ಬಿಜೆಪಿಯವರು ಅಂತಹ ಸಂವಿಧಾನವನ್ನೇ ಬದಲಾಯಿಸುವ ಮಾತನಾಡುತ್ತಿದ್ದಾರೆ. ಕರ್ನಾಟಕದ ಮತದಾರರು ಎಚ್ಚರಿಕೆಯಿಂದ ಇರಬೇಕು ಎಂದರು. ಈ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಲಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.