alex Certify ಮಕ್ಕಳಿಗೆ ಸಂವಿಧಾನದ ಮಹತ್ವ ತಿಳಿಸಲು ಪ್ರತಿದಿನ ಶಾಲೆಯಲ್ಲಿ ಸಂವಿಧಾನ ಪೀಠಿಕೆ ಓದುವ ಪರಿಪಾಠ: ಮಧು ಬಂಗಾರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳಿಗೆ ಸಂವಿಧಾನದ ಮಹತ್ವ ತಿಳಿಸಲು ಪ್ರತಿದಿನ ಶಾಲೆಯಲ್ಲಿ ಸಂವಿಧಾನ ಪೀಠಿಕೆ ಓದುವ ಪರಿಪಾಠ: ಮಧು ಬಂಗಾರಪ್ಪ

ಶಿವಮೊಗ್ಗ: ಬಾಬಾ ಸಾಹೇಬ್ ಅಂಬೇಡ್ಕರರ ಆಶಯದಂತೆ ಸ್ವಾತಂತ್ರ್ಯ, ಸಮಾನತೆ ಮತ್ತು ಸೌಹಾರ್ದತೆ ಸೇರಿದಂತೆ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಸಾಕಾರಗೊಳಿಸುವುದರ ಪ್ರತೀಕವಾಗಿ ಸಂವಿಧಾನದ ಪೀಠಿಕೆಯನ್ನು ಇಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಏಕಕಾಲದಲ್ಲಿ ಲೋಕಾರ್ಪಣೆಗೊಳಿಸಲಾಗುತ್ತಿರುವುದು ಹರ್ಷದ ಸಂಗತಿ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಹೇಳಿದರು.

ಅವರು ಗಣರಾಜ್ಯ ದಿನವಾದ ಇಂದು ನಗರದ ಅಲ್ಲಮಪ್ರಭು ಉದ್ಯಾನವನದಲ್ಲಿ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ವಾಚಿಸುವ ಮೂಲಕ ಲೋಕಾರ್ಪಣೆಗೊಳಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ದೇಶಕ್ಕೆ ಭೇಟಿ ನೀಡಿದ ನೂರನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಹಲವು ವಿಶಿಷ್ಟ ಕಾರ್ಯಕ್ರಮಗಳನ್ನು ರೂಪಿಸಿದೆ. ಅದರ ಭಾಗವಾಗಿ 2025ರ ಅಕ್ಟೋಬರ್ 2ರಿಂದ 2026ರ ಅಕ್ಟೋಬರ್ ಮಾಹೆಯವರೆಗೆ ಗಾಂಧೀ ಭಾರತ ಹೆಸರಿನಲ್ಲಿ ವರ್ಷಪೂರ್ತಿ ಕಾರ್ಯಕ್ರಮಗಳನ್ನು ನಡೆಸಲಿದೆ ಎಂದರು.

2023ರ ಸೆಪ್ಟಂಬರ್ 5ರಿಂದ ಇಂದಿನವರೆಗೆ ರಾಜ್ಯದ ಎಲ್ಲಾ ಶಾಲೆಗಳ ಸುಮಾರು 1.08 ಕೋಟಿ ವಿದ್ಯಾರ್ಥಿಗಳು ಪ್ರತಿದಿನ ಶಾಲೆಯಲ್ಲಿ ಸಂವಿಧಾನದ ಪೀಠಿಕೆಯನ್ನು ಓದುವ ಪರಿಪಾಠ ಆರಂಭಿಸಲಾಗಿದೆ. ಈ ಮೂಲಕ ಮಕ್ಕಳಿಗೆ ಸಂವಿಧಾನದ ಮಹತ್ವ ತಿಳಿಸಲಾಗುತ್ತಿದೆ ಎಂದ ಅವರು, ಪೀಠಿಕೆಯನ್ನು ಅರ್ಥೈಸಿಕೊಂಡು ಅನುಸರಿಸುವ ಅಗತ್ಯವಿದೆ ಎಂದವರು ನುಡಿದರು.

ಗ್ಯಾರೆಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದಿಂದಾಗಿ ಸಾಮಾಜಿಕ ಆರ್ಥಿಕ ಸಮಾನತೆಗೆ ಸಹಕಾರಿಯಾಗಿದೆ ಎಂದ ಅವರು, ಸರ್ಕಾರದ ವತಿಯಿಂದ ಇನ್ನಷ್ಟು ರಚನಾತ್ಮಕ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಟಾನಕ್ಕೆ ತರುವ ಉದ್ದೇಶ ಹೊಂದಲಾಗಿದೆ ಎಂದರು.

ಮೈಕ್ರೋ ಫೈನಾನ್ಸ್, ಮೀಟರ್ ಬಡ್ಡಿದಂಧೆ ನಿಯಂತ್ರಣಕ್ಕೆ ಈಗಾಗಲೇ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಮಹತ್ವದ ಸಭೆಯನ್ನು ನಡೆಸಲಾಗಿದ್ದು, ಈ ಪಿಡುಗಿನ ಸಮಗ್ರ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...