ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯೇ ದೊಡ್ಡ ಸಮಸ್ಯೆಯಾಗಿದೆ. ಸಮಯಕ್ಕೆ ಸರಿಯಾಗಿ ನಿಗದಿತ ಸ್ಥಳ ತಲುಪಲು ಹರ ಸಾಹಸವಾಗಿ ಪರಿಣಮಿಸಿದೆ.
ಇದೆಲ್ಲಕ್ಕೂ ಇನ್ನು ಮುಕ್ತಿ ಸಿಗಲಿದೆ. ಸರ್ಕಾರ ಸಿಗ್ನಲ್ ಮುಕ್ತ ಕಾರಿಡಾರ್ ನಿರ್ಮಾಣಕ್ಕೆ ಕ್ರಮ ಕೈಗೊಂಡಿದೆ. ಬೆಂಗಳೂರಿನ 18 ಕಡೆ ಸುಮಾರು 12 ಸಾವಿರ ಕೋಟಿ ರೂ. ವೆಚ್ಚದಲ್ಲಿ ಒಟ್ಟು 100 ಕಿಲೋಮೀಟರ್ ಉದ್ದದ ಸಿಗ್ನಲ್ ಮುಕ್ತ ಕಾರಿಡಾರ್ ನಿರ್ಮಾಣ ಮಾಡಲಾಗುವುದು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದು, ಸಂಚಾರ ದಟ್ಟಣೆ ನಿಯಂತ್ರಿಸಲು ಬೆಂಗಳೂರಿನ 18 ಕಡೆ ಒಟ್ಟು 100 ಕಿಮೀ ಉದ್ದದ ಸಿಗ್ನಲ್ ಮುಕ್ತ ಕಾರಿಡಾರ್(ಮೇಲ್ಸೇತುವೆ) ನಿರ್ಮಿಸಲು ಉದ್ದೇಶಿಸಲಾಗಿದೆ. ಈ ಯೋಜನೆಗೆ ಸುಮಾರು 12,000 ಕೋಟಿ ರೂ. ವೆಚ್ಚವಾಗಬಹುದು ಎಂದು ತಿಳಿಸಿದ್ದಾರೆ.