
ಬೆಂಗಳೂರು: ರಾಜ್ಯದಲ್ಲಿ ಅಕ್ವಾ ಪಾರ್ಕ್ ಗಳ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು. ಈ ಕುರಿತು ಕೇಂದ್ರ ಸರ್ಕಾರಕ್ಕೆ ವಿಸ್ತೃತ ಯೋಜನಾ ವರದಿ ಸಲ್ಲಿಸಲು ಯೋಜಿಸಲಾಗಿದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ್ ವೈದ್ಯ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.
ವಿಧಾನಪರಿಷತ್ ಕಲಾಪದ ವೇಳೆ ಕಾಂಗ್ರೆಸ್ ಸದಸ್ಯ ಎಂ. ನಾಗರಾಜ್ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಬಜೆಟ್ ನಲ್ಲಿ ಅಕ್ವಾ ಪಾರ್ಕ್ ಸ್ಥಾಪನೆ ಬಗ್ಗೆ ಉದ್ದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ವಿಸ್ತೃತ ಯೋಜನಾ ವರದಿ ತಯಾರಿಸಿ ಸಲ್ಲಿಸಲು ಕ್ರಮ ವಹಿಸಲಾಗಿದೆ ಎಂದು ಹೇಳಿದ್ದಾರೆ.