ಬೆಂಗಳೂರು : ಬೆಂಗಳೂರಿನಲ್ಲಿ 100 ಮೆಗಾವಾಟ್ ಸಾಮರ್ಥ್ಯದ ಡೇಟಾ ಸೆಂಟರ್ ಪಾರ್ಕ್ ನಿರ್ಮಾಣ ಸಂಬಂಧ ವೆಬ್ವರ್ಕ್ಸ್ ಕಂಪನಿಯೊಂದಿಗೆ 20 ಸಾವಿರ ಕೋಟಿ ಒಪ್ಪಂದಕ್ಕೆ ಸರ್ಕಾರ ಸಹಿ ಹಾಕಿದೆ.
ಸ್ವಿಟ್ಜರ್ಲೆಂಡ್ನ ದಾವೋಸ್ ನಗರದಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಸಮಾವೇಶದಲ್ಲಿ ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ನೇತೃತ್ವದ ಕರ್ನಾಟಕ ನಿಯೋಗ ಪಾಲ್ಗೊಂಡಿದೆ. ಹಲವಾರು ಕಂಪನಿಗಳ ಮುಖ್ಯಸ್ಥರ ಜತೆ ಸಭೆ ನಡೆಸಿದ ನಿಯೋಗವು ಬಂಡವಾಳ ಹೂಡಿಕೆಗೆ ಸಂಬಂಧಿಸಿದ ಹಲವು ಒಪ್ಪಂದಗಳಿಗೂ ಸಹಿ ಹಾಕಿದೆ. ಅದರಲ್ಲಿ ವೆಬ್ವರ್ಕ್ಸ್ ಕಂಪನಿಯು ಬೆಂಗಳೂರಿನಲ್ಲಿ ಸ್ಥಾಪಿಸಲಿರುವ 100 ಮೆಗಾವಾಟ್ ಸಾಮರ್ಥ್ಯದ ಡೇಟಾ ಸೆಂಟರ್ ಪಾರ್ಕ್ಗೆ ₹ 20 ಸಾವಿರ ಕೋಟಿ ಬಂಡವಾಳ ಹೂಡಲಿದೆ.
ಇದು ಒಟ್ಟು 100 ಮೆಗಾವ್ಯಾಟ್ ಸಾಮರ್ಥ್ಯದ, 20 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆಯ ಡೇಟಾ ಸೆಂಟರ್ ಪಾರ್ಕ್ ಆಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.