alex Certify BIG NEWS : ‘ರಾಮೋಜಿ ಫಿಲ್ಮ್ ಸಿಟಿ’ ಮಾದರಿಯಲ್ಲಿ ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣ : CM ಸಿದ್ದರಾಮಯ್ಯ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ರಾಮೋಜಿ ಫಿಲ್ಮ್ ಸಿಟಿ’ ಮಾದರಿಯಲ್ಲಿ ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣ : CM ಸಿದ್ದರಾಮಯ್ಯ ಘೋಷಣೆ

ಮೈಸೂರು : ರಾಮೋಜಿ ಫಿಲ್ಮ್ ಸಿಟಿ’ ಮಾದರಿಯಲ್ಲಿ ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಿಸುವ ಕುರಿತು ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಕೆಲವು ಪ್ರಮುಖ ಸೂಚನೆಗಳನ್ನು ನೀಡಿದರು.

•ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಈಗಾಗಲೇ ಗುರುತಿಸಲಾಗಿರುವ 11೦ ಎಕರೆ ಕೆಐಎಡಿಬಿ ಭೂಮಿಯನ್ನು ಆದಷ್ಟು ಬೇಗನೆ, ವಾರ್ತಾ ಮತ್ತು ಸಾರ್ವಜನಿಕ ಇಲಾಖೆಗೆ ಹಸ್ತಾಂತರಿಸಿ ಆದೇಶ ಹೊರಡಿಸಲು ಕ್ರಮ ವಹಿಸಬೇಕು •ವಾರ್ತಾ ಇಲಾಖೆ ಜಮೀನು ಸ್ವಾಧೀನಪಡಿಸಿಕೊಂಡ ಬಳಿಕ ಆದಷ್ಟು ಬೇಗನೆ ಟೆಂಡರ್‌ ಕರೆದು ನಿರ್ಮಾಣ ಪ್ರಕ್ರಿಯೆಗೆ ಚಾಲನೆ ನೀಡಬೇಕು. •ಚಿತ್ರನಗರಿಯನ್ನು ಪಿಪಿಪಿ ಮಾದರಿಯಲ್ಲಿ ಅನುಷ್ಠಾನಗೊಳಿಸಲು ಟ್ರಾನ್ಸಾಕ್ಷನ್‌ ಅಡ್ವೈಸರ್‌ ನೇಮಕ ಮಾಡಲು ಟೆಂಡರ್‌ ಕರೆಯಬೇಕು. •ಇದರೊಂದಿಗೆ ಹೆಚ್ಚುವರಿಯಾಗಿ ಎರಡನೇ ಹಂತದ ವಿಸ್ತರಣೆಗೆ 50 ಎಕರೆ ಗುರುತಿಸಿ ಹಸ್ತಾಂತರಿಸುವ ಪ್ರಕ್ರಿಯೆ ಆರಂಭಿಸಬೇಕು. •ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ತಕ್ಷಣ, ಜಮೀನಿಗೆ ಕಾಂಪೌಂಡ್ ನಿರ್ಮಿಸುವ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಕೈಗೆತ್ತಿಕೊಳ್ಳಬೇಕು. •ಮೂರು ವರ್ಷಗಳ ಒಳಗಾಗಿ ಚಿತ್ರನಗರಿ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. •ಚಿತ್ರರಂಗದವರ ಅಭಿಪ್ರಾಯಗಳನ್ನು ಸಹ ಪಡೆದುಕೊಂಡು, ಎಲ್ಲಾ ಸೌಲಭ್ಯಗಳು ಒಳಗೊಂಡಿರುವ ಚಿತ್ರನಗರಿ ನಿರ್ಮಾಣವಾಗಬೇಕು. •ಹೈದ್ರಾಬಾದ್‌ನಲ್ಲಿರುವ ರಾಮೋಜಿ ಫಿಲ್ಮ್‌ ಸಿಟಿ ಮಾದರಿಯಲ್ಲಿ ಚಿತ್ರನಗರಿ ನಿರ್ಮಾಣವಾಗಬೇಕು. ಸಿನೆಮಾ ಜಗತ್ತಿನ ಬೇಡಿಕೆಗೆ ಅನುಗುಣವಾಗಿ ಅತ್ಯಾಧುನಿಕ ತಂತ್ರಜ್ಞಾನ ಸೌಲಭ್ಯ ಇಲ್ಲಿ ಲಭ್ಯವಿರಬೇಕು. ಈ ಕುರಿತು ದೇಶದ ಪ್ರಮುಖ ಮೂರು ಚಿತ್ರನಗರಿಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿ, ಒಂದು ಉತ್ಕೃಷ್ಟ ಯೋಜನೆ ಸಿದ್ಧಪಡಿಸಬೇಕು. • ಸರ್ಕಾರಕ್ಕೆ ಹೊರೆಯಾಗದಂತೆ ಚಿತ್ರನಗರಿ ನಿರ್ಮಾಣವಾಗಬೇಕು. ಚಿತ್ರನಗರಿ ಸ್ವರೂಪ ಕುರಿತಾಗಿ ಸಮಗ್ರವಾದ ವರದಿಯನ್ನು ಸಲ್ಲಿಸಬೇಕು. •ಚಿತ್ರನಗರಿಯಿಂದ ಪ್ರವಾಸೋದ್ಯಮಕ್ಕೂ ಹೆಚ್ಚಿನ ಉತ್ತೇಜನ ದೊರೆಯಬೇಕು. ಈ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯಿಂದಲೂ ಪ್ರಸ್ತಾವನೆಯನ್ನು ಸಲ್ಲಿಸಲಿ ಎಂದರು.

 

 

 

 

 

 

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...