alex Certify BREAKING : ಪರಿಸರ ಸೂಕ್ಷ್ಮ ವಲಯದಲ್ಲಿ ಕಟ್ಟಡ ನಿರ್ಮಾಣ : ಗೋಲ್ಡನ್ ಸ್ಟಾರ್ ಗಣೇಶ್ ಗೆ ನೋಟಿಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಪರಿಸರ ಸೂಕ್ಷ್ಮ ವಲಯದಲ್ಲಿ ಕಟ್ಟಡ ನಿರ್ಮಾಣ : ಗೋಲ್ಡನ್ ಸ್ಟಾರ್ ಗಣೇಶ್ ಗೆ ನೋಟಿಸ್

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದ ಪರಿಸರ ಸೂಕ್ಷ್ಮ ವಲಯದಲ್ಲಿ ನಟ ಗಣೇಶ್ ಬೃಹತ್ ಕಟ್ಟಡ ನಿರ್ಮಿಸುತ್ತಿದ್ದು, ಪರಿಸರವಾದಿಗಳಿಂದ ಆಕ್ಷೇಪ ವ್ಯಕ್ತವಾಗಿತ್ತು.

ಇದೀಗ ನಟ ಗೋಲ್ಡನ್ ಸ್ಟಾರ್ ಗಣೇಶ್ ಗೆ ಅರಣ್ಯಾಧಿಕಾರಿ ನೋಟಿಸ್ ನೀಡಿದ್ದಾರೆ. ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿಗಳು ನಟ ಗಣೇಶ್ ಗೆ ಎಸಿಎಫ್ ವರದಿ ಅನ್ವಯ ನೋಟಿಸ್ ಕೊಟ್ಟಿದ್ದು, ಈ ಬಗ್ಗೆ ಮಾಹಿತಿ ನೀಡುವಂತೆ ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ ಎಂದು ಹೇಳಲಾಗಿದೆ. ಈ ಬಗ್ಗೆ ನಟ ಗಣೇಶ್ ಪ್ರತಿಕ್ರಿಯೆ ನೀಡಿದ್ದು, ನಾನು ಯಾವುದೇ ಕಾನೂನು ಉಲ್ಲಂಘನೆ ಮಾಡಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ವಾಸ ಮತ್ತು ಕೃಷಿ ಉದ್ದೇಶದಿಂದ ತಾತ್ಕಾಲಿಕ ಮನೆ ನಿರ್ಮಾಣಕ್ಕೆ ಅನುಮತಿ ಪಡೆದು ಬೃಹತ್ ಕಟ್ಟಡ ನಿರ್ಮಿಸುತ್ತಿರುವ ಆರೋಪ ಕೇಳಿ ಬಂದಿದೆ. ಕಟ್ಟಡ ನಿರ್ಮಾಣಕ್ಕೆ ದೊಡ್ಡ ಗಾತ್ರದ ಕಾಂಕ್ರೀಟ್ ಪಿಲ್ಲರ್ ಗಳನ್ನು ಹಾಕಲಾಗಿದ್ದು, ಜೆಸಿಬಿ ಬಳಕೆ ಮಾಡಲಾಗಿದೆ. ನಿರ್ಮಾಣ ಕಾರ್ಯ ಬಿರುಸಿನಿಂದ ಸಾಗಿದೆ.
ಗುಂಡ್ಲುಪೇಟೆ ತಾಲೂಕು ಹಂಗಳ ಹೋಬಳಿ ಜಕ್ಕಳ್ಳಿಯಲ್ಲಿ ಒಂದು ಎಕರೆ 24 ಗುಂಟೆ ಜಮೀನಿದ್ದು, ವಾಸದ ಮನೆ ಮತ್ತು ತೋಟಗಾರಿಕೆ ಉದ್ದೇಶದಿಂದ ಸುತ್ತಲೂ ಕಾಂಪೌಂಡ್ ನಿರ್ಮಿಸಲು ಗಣೇಶ್ ಅರಣ್ಯ ಇಲಾಖೆಗೆ ಮನವಿ ಸಲ್ಲಿಸಿದ್ದರು.

ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಜಮೀನು ಇದೆ. ಅಧಿಸೂಚನೆ ಪ್ರಕಾರ ವಾಣಿಜ್ಯ ಚಟುವಟಿಕೆಗಳಿಗೆ ಪರಿಸರ ಸೂಕ್ಷ್ಮ ವಲಯದಲ್ಲಿ ಅವಕಾಶ ಇಲ್ಲ. ಶಾಶ್ವತ ಕಟ್ಟಡ ನಿರ್ಮಾಣ ಮಾಡುವಂತಿಲ್ಲ. ತಾತ್ಕಾಲಿಕ ಕಟ್ಟಡಗಳನ್ನು ವಸತಿ ಉದ್ದೇಶಕ್ಕೆ ಮಾತ್ರ ನಿರ್ಮಿಸಿ ಬಳಸಬಹುದಾಗಿದೆ. ವನ್ಯಜೀವಿಗಳ ಸಂಚಾರಕ್ಕೆ ತೊಂದರೆ ಮಾಡುವಂತಿಲ್ಲ. ಇವೆಲ್ಲ ಷರತ್ತುಗಳೊಂದಿಗೆ ಪರಿಸರ ಸೂಕ್ಷ್ಮ ವಲಯ ಮೇಲ್ವಿಚಾರಣಾ ಸಮಿತಿ ಗಣೇಶ್ ಅವರಿಗೆ ಅನುಮತಿ ನೀಡಿದ್ದು, ಮಾರ್ಗಸೂಚಿಗೆ ವಿರುದ್ಧವಾಗಿ ಬೃಹತ್ ಕಟ್ಟಡ ನಿರ್ಮಿಸಲಾಗುತ್ತಿದೆ ಎಂದು ಹೇಳಲಾಗಿದೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...