alex Certify ವಕ್ಫ್ ಆಸ್ತಿಗಳ ಸಂರಕ್ಷಣೆಗಾಗಿ ಕಾಂಪೌಂಡ್ ಗೋಡೆ ನಿರ್ಮಾಣ : ರಾಜ್ಯ ಸರ್ಕಾರದಿಂದ ಅನುದಾನ ಮಂಜೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಕ್ಫ್ ಆಸ್ತಿಗಳ ಸಂರಕ್ಷಣೆಗಾಗಿ ಕಾಂಪೌಂಡ್ ಗೋಡೆ ನಿರ್ಮಾಣ : ರಾಜ್ಯ ಸರ್ಕಾರದಿಂದ ಅನುದಾನ ಮಂಜೂರು

ಬೆಂಗಳೂರು : ವಕ್ಫ್ ಆಸ್ತಿಗಳ ಸಂರಕ್ಷಣೆಗಾಗಿ ಕಾಂಪೌಂಡ್ ಗೋಡೆ ನಿರ್ಮಾಣ ಮಾಡಲು ಅನುದಾನ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕ ರಾಜ್ಯದ ವಕ್ಫ್ ಆಸ್ತಿಗಳಾದ ಖಬರಸ್ಮಾನ್, ಈದ್ಯಾದ ಜಾಗಗಳನ್ನು ಅಕ್ರಮ ಒತ್ತುವರಿ, ಅನಧಿಕೃತ ಸ್ವಾಧೀನ ಮತ್ತು ವಿವಾದಗಳಿಂದ ಉದ್ಭವಿಸುತ್ತಿರುವ ಸಮಸ್ಯೆಗಳನ್ನು ತಡೆಯಲು ಆಸ್ತಿಗಳ ಸುತ್ತ ಬೇಲಿ, ಗೋಡೆಯನ್ನು ಹಾಕುವುದು ಅವಶ್ಯಕವಾಗಿರುವುದರಿಂದ, ಅದನ್ನು ಸಂರಕ್ಷಣೆ ಮಾಡುವ ಯೋಜನೆಯಡಿ ಕೆಲವು ನಿಬಂಧನೆಗಳನ್ನು ರೂಪಿಸಿ ಆದೇಶ ಹೊರಡಿಸಲಾಗಿರುತ್ತದೆ.

ರಾಜ್ಯದ ವಿವಿಧ ವಕ್ಫ್ ಆಸ್ತಿಗಳ ಸಂರಕ್ಷಣೆಗಾಗಿ ಕಾಂಪೌಂಡ್ ಗೋಡೆ ನಿರ್ಮಾಣ ಮಾಡಲು ಅನುದಾನ ಮಂಜೂರು ಮಾಡುವಂತೆ ಕೋರಿ ಪ್ರಸ್ತಾವನೆಗಳು ಸ್ವೀಕೃತವಾಗಿರುತ್ತವೆ. ಸದರಿ ಪ್ರಸ್ತಾವನೆಗಳನ್ನು ಪರಿಶೀಲಿಸಿ, ಕೆಳಕಂಡಂತೆ ಆದೇಶಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ, ಈ ಆದೇಶದ ಅನುಬಂಧದಲ್ಲಿ ನಮೂದಿಸಿರುವಂತೆ ರಾಜ್ಯದ ಒಟ್ಟು 416 ವಕ್ಸ್ ಆಸ್ತಿಗಳ ಸಂರಕ್ಷಣೆಗಾಗಿ ಕಾಂಪೌಂಡ್ ಗೋಡೆ ನಿರ್ಮಾಣ ಮಾಡಲು ಒಟ್ಟು ರೂ.3184.50ಲಕ್ಷಗಳ (ಮೂವತ್ತೊಂದು ಕೋಟಿ ಎಂಭತ್ತತನಾಲ್ಕು ಲಕ್ಷ ಐವತ್ತುಸಾವಿರ ರೂಪಾಯಿಗಳು ಮಾತ್ರ) ಅನುದಾನವನ್ನು ಈ ಕೆಳಕಂಡ ಷರತ್ತಿಗೊಳಪಟ್ಟು ಮಂಜೂರು ಮಾಡಿ ಆದೇಶಿಸಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...