ಬೆಂಗಳೂರು: ಕಟ್ಟಡ ಕಾರ್ಮಿಕರು ಮತ್ತು ಅವರ ಕುಟುಂಬಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಗುಂಪು ವಸತಿ ಯೋಜನೆ ಜಾರಿಗೆ ಸರ್ಕಾರ ಮುಂದಾಗಿದೆ.
ಕಾರ್ಮಿಕ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ವಿಕಾಸಸೌಧದಲ್ಲಿ ಕಾರ್ಮಿಕ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ.
ಈಗಾಗಲೇ ಕಾರ್ಮಿಕರಿಗೆ ಆಸ್ಪತ್ರೆ ಸಹಾಯಧನ, ಉಚಿತ ಟೂಲ್ ಕಿಟ್, ಮಕ್ಕಳ ಶಿಕ್ಷಣಕ್ಕೆ ವಿದ್ಯಾರ್ಥಿ ವೇತನ ಸೌಲಭ್ಯ ಜಾರಿಯಾಗಿದೆ. ವಸತಿ ಸೌಲಭ್ಯ ಕುರಿತಾಗಿ ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿತ್ತು. ಇದರ ಭಾಗವಾಗಿ ಸಚಿವರು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ರಾಜ್ಯ ಸರ್ಕಾರದ ವಸತಿ ಇಲಾಖೆ, ಕಾರ್ಮಿಕ ಇಲಾಖೆ, ಪೌರಾಡಳಿತ ಇಲಾಖೆ ಜೊತೆಗೂಡಿ ಯೋಜನೆ ಜಾರಿಗೆ ತರಲು ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಶೀಘ್ರವೇ ಗುಂಪು ವಸತಿ ಯೋಜನೆ ಜಾರಿಗೆ ಬರಲಿದೆ ಎನ್ನಲಾಗಿದೆ.