ನಮ್ಮ ಆಹಾರ ಕ್ರಮಗಳು ಸರಿಯಾಗಿರದಿದ್ದರೆ ನಮ್ಮ ಆರೋಗ್ಯದ ಮೇಲೆ ಮಾತ್ರವಲ್ಲ ನಮ್ಮ ಲೈಂಗಿಕ ಜೀವನದ ಮೇಲೂ ಪರಿಣಾಮ ಬೀರುತ್ತದೆ. ಸ್ತ್ರಿಯರಲ್ಲಿ ಈಸ್ಟ್ರೋಜನ್ ಹಾಗೂ ಪುರುಷರಲ್ಲಿ ಟೆಸ್ಟೋಸ್ಟರಾನ್ ಹಾರ್ಮೋನ್ ಗಳು ಲೈಂಗಿಕ ಆಸಕ್ತಿಯ ಬಗ್ಗೆ ಪ್ರಭಾವ ಬೀರುತ್ತದೆ. ಆದರೆ ಇದರಲ್ಲಿ ವ್ಯತ್ಯಾಸವಾದರೆ ಕಾಮಾಸಕ್ತಿಯ ಮೇಲೆ ಪರಿಣಾಮ ಉಂಟಾಗುತ್ತದೆ. ಹಾಗಾಗಿ ಇಂತಹ ಆಹಾರಗಳನ್ನು ಸೇವಿಸಬೇಡಿ.
*ವೈನ್ ನಿಮ್ಮ ಕಾಮಾಸಕ್ತಿಯನ್ನು ಕಡಿಮೆ ಮಾಡುತ್ತದೆ. ಇದು ನಿಮಿರುವಿಕೆ ಅಪಸಾಮಾನ್ಯ ಸಮಸ್ಯೆಗೆ ಕಾರಣವಾಗುತ್ತದೆ.
*ಹುರಿದ ಆಹಾರ ಪದಾರ್ಥಗಳನ್ನು ಅತಿಯಾಗಿ ಸೆವಿಸಿದರೆ ನಿಮ್ಮ ಕಾಮಾಸಕ್ತಿ ಕಡಿಮೆಯಾಗುತ್ತದೆ. ಇದರಲ್ಲಿರುವ ಟ್ರಾನ್ಸ್ ಫ್ಯಾಟ್ ಪುರುಷರಲ್ಲಿ ಅಸಹಜ ವೀರ್ಯ ಉತ್ಪಾದನೆಯನ್ನು ಹೆಚ್ಚಿಸುತ್ತದೆ.
*ಕಾಫಿಯಲ್ಲಿರುವ ಕೆಫಿನ್ ನಿಮ್ಮ ಲೈಂಗಿಕ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಕಾಫಿಯನ್ನು ಸೇವಿಸಬೇಡಿ.
*ಪ್ಯಾಕಿಂಗ್ ಆಹಾರಗಳನ್ನು ಸೇವಿಸಬಾರದು, ಇದಕ್ಕೆ ಕೆಡದಂತೆ ರಾಸಾಯನಿಕಗಳನ್ನು ಹಾಕುವುದರಿಂದ ಇದು ರಕ್ತ ಸಂಚಾರವನ್ನು ಕಡಿಮೆ ಮಾಡುತ್ತದೆ. ಇದರಿಂದ ಕಾಮಾಸಕ್ತಿ ಕಡಿಮೆಯಾಗುತ್ತದೆ.
*ಸಂಸ್ಕರಿಸಿದ ಆಹಾರಗಳಲ್ಲಿ ಪ್ರೋಟೀನ್ ಮತ್ತು ಕೊಬ್ಬು ಸಾಕಷ್ಟು ಇಲ್ಲದಿರುವುದರಿಂದ ಇದು ಲೈಂಗಿಕ ಜೀವನದ ಮೇಲೆ ಪರಿಣಾಮ ಬೀರುತ್ತದೆ.