alex Certify ಕಲುಷಿತ ನೀರು ಪ್ರಕರಣ: ಸಾವಿನ ಸಂಖ್ಯೆ 6ಕ್ಕೇರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಲುಷಿತ ನೀರು ಪ್ರಕರಣ: ಸಾವಿನ ಸಂಖ್ಯೆ 6ಕ್ಕೇರಿಕೆ

ತುಮಕೂರು: ಕಲುಷಿತ ನೀರು ಸೇವಿಸಿ ವಾಂತಿ-ಭೇದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿಯಲ್ಲಿ ಕಲುಷಿತ ನೀರು ಸೇವಿಸಿ ನಾಲ್ವರು ಮೃತಪಟ್ಟಿದ್ದರು. ಇದೀಗ ಇನ್ನಿಬ್ಬರು ಸಾವನ್ನಪ್ಪಿದ್ದು, ಒಟ್ಟು 6 ಜನರು ಮೃತಪಟ್ಟಿದ್ದಾರೆ.

ಜಿಲ್ಲಾಸ್ಪತ್ರೆಯಲ್ಲಿ ನಿನ್ನೆ ಚಿಕ್ಕದಾಸಪ್ಪ (76), ಪೆದ್ದಣ್ಣ (72)ಮೃತಪಟ್ಟಿದ್ದರು. ಅಸ್ತಮಾದಿಂದ ಹನುಮಕ್ಕ (80) , ನಿಂಗಮ್ಮ (75), ನಾಗಪ್ಪ ಹಾಗೂ ವಾಂತಿ ಭೇದಿಯಿಂದ ಮೀನಾಕ್ಷಿ (3) ಮೃತಪಟ್ಟಿದ್ದರು. ನಾಲ್ವರು ವೈಯಕ್ತಿಕ ಕಾಯಿಲೆಗಳಿಂದ ಹಾಗೂ ಇಬ್ಬರೂ ವಾಂತಿ-ಭೇದಿಯಿಂದ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...