
ಯಾದಗಿರಿ: ಕಲುಷಿತ ನೀರು ಸೇವಿಸಿ 9 ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಕಾಕಲವಾರ ಗ್ರಾಮದಲ್ಲಿ ನಡೆದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಆರೋಪದಲ್ಲಿ ಕಾಕಲವಾರ ಗ್ರಾಮ ಪಂಚಾಯತ್ ಪಿಡಿಒ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಮಲ್ಲರೆಡ್ಡಿ ಸಸ್ಪೆಂಡ್ ಆಗಿರುವ ಗ್ರಾಮ ಪಂಚಾಯತ್ ಪಿಡಿಒ. ಗ್ರಾಮದ ಮೂರು ಬೋರ್ ವೆಲ್ ನೀರು ಕುಡಿಯಲು ಯೋಗ್ಯವಲ್ಲ ಎಂದು ವರದಿ ಬಂದಿತ್ತು. ಆದಾಗ್ಯೂ ಪಿಡಿಒ ಮಲ್ಲರೆಡ್ಡಿ ಅದೇ ನೀರನ್ನು ಕುಡಿಯಲು ಪೂರೈಕೆ ಮಾಡಿದ್ದಾರೆ ಈ ಹಿನ್ನೆಲೆಯಲ್ಲಿ ಕರ್ತವ್ಯಲೋಪ ಆರೋಪದಲ್ಲಿ ಅಮಾನತುಗೊಳಿಸಿ ಜಿಲ್ಲಾ ಪಂಚಾಯತ್ ಸಿಇಓ ಆದೇಶ ಹೊರಡಿಸಿದ್ದಾರೆ.