ಚಿತ್ರದುರ್ಗ : ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 4 ಕ್ಕೇರಿಕೆಯಾಗಿದೆ.ಮೃತರನ್ನು ರುದ್ರಪ್ಪ (50 ) ಎಂದು ಗುರುತಿಸಲಾಗಿದೆ.
ಕವಾಡಿಗರಹಟ್ಟಿ ನಿವಾಸಿಯಾದ ರುದ್ರಪ್ಪ ಕಲುಷಿತ ನೀರು ಸೇವಿಸಿ ವಾಂತಿ-ಭೇದಿಯಿಂದ ಅಸ್ವಸ್ಥಗೊಂಡು ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 4 ಕ್ಕೇರಿಕೆಯಾಗಿದೆ. ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವನೆ ಹಿನ್ನೆಲೆ 100 ಕ್ಕೂ ಹೆಚ್ಚು ಮಂದಿ ವಾಂತಿ ಭೇದಿಯಿಂದ ಅಸ್ವಸ್ಥಗೊಂಡಿದ್ದಾರೆ.
ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೀರು ಸರಬರಾಜು ಸಹಾಯಕನನ್ನು ಅಮಾನತು ಮಾಡಲಾಗಿದೆ.ಕರ್ತವ್ಯಲೋಪ ಹಿನ್ನೆಲೆ ನೀರು ಸರಬರಾಜು ಸಹಾಯಕ ಸಿ. ಹೆಚ್ ಪ್ರಕಾಶ್ ಬಾಬು ಅವರನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ದಿವ್ಯಾಪ್ರಭು ಆದೇಶ ಹೊರಡಿಸಿದ್ದಾರೆ.