ಚಿತ್ರದುರ್ಗ : ಚಿತ್ರದುರ್ಗದ ಕಲುಷಿತ ನೀರು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 6 ಕ್ಕೇರಿಕೆಯಾಗಿದೆ.
ಚಿತ್ರದುರ್ಗ ತಾಲೂಕಿನ ಚಿಕ್ಕಪುರದ ಕರಿಬಸಪ್ಪ ಎಂಬುವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗೆ ಕವಾಡಿಗರಹಟ್ಟಿ ನಿವಾಸಿಯಾದ ರುದ್ರಪ್ಪ ಕಲುಷಿತ ನೀರು ಸೇವಿಸಿ ವಾಂತಿ-ಭೇದಿಯಿಂದ ಅಸ್ವಸ್ಥಗೊಂಡು ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದರು. ಇದೀಗ ಮತ್ತೋರ್ವ ವ್ಯಕ್ತಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವನೆ ಹಿನ್ನೆಲೆ 100 ಕ್ಕೂ ಹೆಚ್ಚು ಮಂದಿ ವಾಂತಿ ಭೇದಿಯಿಂದ ಅಸ್ವಸ್ಥಗೊಂಡಿದ್ದಾರೆ. ಈಗಾಗಲೇ ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೀರು ಸರಬರಾಜು ಸಹಾಯಕನನ್ನು ಅಮಾನತು ಮಾಡಲಾಗಿದೆ.ಕರ್ತವ್ಯಲೋಪ ಹಿನ್ನೆಲೆ ನೀರು ಸರಬರಾಜು ಸಹಾಯಕ ಸಿ. ಹೆಚ್ ಪ್ರಕಾಶ್ ಬಾಬು ಅವರನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ದಿವ್ಯಾಪ್ರಭು ಆದೇಶ ಹೊರಡಿಸಿದ್ದಾರೆ.