alex Certify BREAKING : ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ ಪ್ರಕರಣ : ಮೃತರ ಸಂಖ್ಯೆ 7 ಕ್ಕೇರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ ಪ್ರಕರಣ : ಮೃತರ ಸಂಖ್ಯೆ 7 ಕ್ಕೇರಿಕೆ

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 7 ಕ್ಕೇರಿಕೆಯಾಗಿದೆ.

ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದ ಕಾವಾಡಿಗರ ಹಟ್ಟಿ ನಿವಾಸಿ ಶಿವಮ್ಮ (70) ಅವರು ಶುಕ್ರವಾರ ರಾತ್ರಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಸೋಮವಾರ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದ ಕಾವಾಡಿಗರ ಹಟ್ಟಿ ನಿವಾಸಿ ಶಿವಮ್ಮ ಶುಕ್ರವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಜುಲೈ 30ರಂದು ಚಿತ್ರದುರ್ಗ ಜಿಲ್ಲೆಯ ಕಾವಾಡಿಗರಹಟ್ಟಿಯ ಟ್ಯಾಂಕ್ನಿಂದ ಬಿಟ್ಟ ಕಲುಷಿತ ನೀರು ಸೇವಿಸಿ 200ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದರು.

ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನೀರು ಸರಬರಾಜು ಸಹಾಯಕನನ್ನು ಅಮಾನತು ಮಾಡಲಾಗಿದೆ.  ಕರ್ತವ್ಯಲೋಪ ಹಿನ್ನೆಲೆ ನೀರು ಸರಬರಾಜು ಸಹಾಯಕ ಸಿ. ಹೆಚ್ ಪ್ರಕಾಶ್ ಬಾಬು ಅವರನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ದಿವ್ಯಾಪ್ರಭು ಆದೇಶ ಹೊರಡಿಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...