
ಕೋಲಾರ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚುತ್ತಿದ್ದು, ಕಲುಷಿತ ನೀರಿನಿಂದ ಜನರು ಪ್ರಾಣ ಕಳುದುಕೊಳ್ಳುತ್ತಿರುವ ಪ್ರಕರಣ ಬೆಳಕಿಗೆ ಬರುತ್ತಿದೆ. ಕಲುಷಿತ ನೀರು ಸೇವಿಸಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮಿಣಜೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರಿನಿಂದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 7 ಜನರು ತೀವ್ರವಾಗಿ ಅಸ್ವಸ್ಥರಾಗಿದ್ದಾರೆ.
ಮಿಣಜೇನಹಳ್ಳಿ ನಿವಾಸಿ ವೆಂಕಟರಮಣಪ್ಪ ಮೃತ ದುರ್ದೈವಿ. ಅಸ್ವಸ್ಥಗೊಂಡಿರುವ 7 ಜನರಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಿಣಜೇನಹಳ್ಳಿ ಗ್ರಾಮಕ್ಕೆ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.