ಬೆಂಗಳೂರು : ನಾಳೆ ಬೆಳಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ಅಖಂಡ ಕರ್ನಾಟಕ ಬಂದ್ ಮಾಡಲಿದ್ದೇವೆ ಎಂದು ವಾಟಾಳ್ ನಾಗರಾಜ್ ಘೋಷಣೆ ಮಾಡಿದ್ದಾರೆ.
ಬಂದ್ ಕುರಿತು ಇಂದು ಸುದ್ದಿಗಾರರ ಜೊತೆ ಮಾತನಾಡಿದ ವಾಟಾಳ್ ನಾಗರಾಜ್ ಯಾವುದೇ ಕಾರಣಕ್ಕೂ ಬಂದ್ ವಾಪಸ್ ಪಡೆಯಲ್ಲ, ಬಂದ್ ನಡೆದೇ ನಡೆಯುತ್ತದೆ. ಕೆಲವು ಸಂಘಟನೆಗಳು ಬೆಂಬಲ ನೀಡಿದೆ. ಎಲ್ಲರೂ ಬೆಂಬಲ ಕೊಡಿ. ನಮ್ಮನ್ನು ಬಂಧಿಸಲಿ, ಏನು ಬೇಕಾದರೂ ಮಾಡಲಿ ನಾವು ಬಂದ್ ಮಾಡೇ ಮಾಡ್ತೀವಿ ಎಂದು ಅವರು ಹೇಳಿದರು.
ಕನ್ನಡ ಕಲಿಯಲೇಬೇಕು. ಇಲ್ಲವಾದಲ್ಲಿ ಕರ್ನಾಟಕ ಬಿಟ್ಟು ಹೋಗಬೇಕು
ಕನ್ನಡಿಗರ ಮೇಲೆ ಹಲ್ಲೆ ಪ್ರಕರಣ ಖಂಡಿಸಿ, ಕನ್ನಡ ನಾಡು, ಭಾಷೆ, ನೆಲ-ಜಲ ರಕ್ಷಣೆಗಾಗಿ ಒತ್ತಾಯಿಸಿ ಮಾರ್ಚ್ 22ರಂದು ಕರ್ನಾಟಕ ಬಂದ್ ಗೆ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳು ಕರೆ ನೀಡಿದೆ.ಕನ್ನಡಿಗರ ಮೇಲೆ ಪರಭಾಷಿಗರು ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸುತ್ತಿದ್ದಾರೆ. ಕರ್ನಾಟಕದಲ್ಲಿ ಕನ್ನಡಿಗರ ಮೇಲೆಯೇ ದೌರ್ಜನ್ಯ ನಡೆಸುತ್ತಿದ್ದಾರೆ. ಕನ್ನಡದಲ್ಲಿ ಮಾತನಾಡಿದರೆ ಬೇರೆ ರಾಜ್ಯದವರು ಕನ್ನಡಿಗರ ಮೇಲೆ ಹಲ್ಲೆ ನಡೆಸುತ್ತಿರುವ ಘಟನೆ ನಡೆಯುತ್ತಿರುವುದು ಖಂಡನೀಯ. ಇಂತಹ ಘಟನೆಗಳು ನಿಲ್ಲಬೇಕು ಎಂದು ಗುಡುಗಿದರು.ಈ ನಿಟ್ಟಿನಲ್ಲಿ ಮಾರ್ಚ್ 22ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಕರ್ನಾಟಕದಲ್ಲಿರುವ ಬೇರೆ ರಾಜ್ಯದವರು ಕನ್ನಡ ಕಲಿಯಲೇಬೇಕು. ಇಲ್ಲವಾದಲ್ಲಿ ಕರ್ನಾಟಕ ಬಿಟ್ಟು ಹೋಗಬೇಕು ಎಂದು ಆಗ್ರಹಿಸಿದರು.