ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುವುದು ಎಂದು ಗೃಹ ಸಚಿವ ಡಾ. ಜಿಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಸಚಿನ್ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ ವಹಿಸಲಾಗುವುದು. ನಮ್ಮ ಸಿಐಡಿ ಸಮರ್ಥವಾಗಿದೆ. ಬಿಜೆಪಿ ನಾಯಕರು ಅನಗತ್ಯ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುವುದು ಬೇಡ ಎಂದು ಹೇಳಿದರು.
ಇದೇ ವೇಳೆ ಸಚಿವ ಪ್ರೊಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಒತ್ತಾಯಕ್ಕೆ ಪ್ರತಿಕ್ರಿಯಿಸಿರುವ ಗೃಹ ಸಚಿವರು, ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೊಡುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿದರು.