alex Certify ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್ : ಸಚಿವ ಪ್ರಿಯಾಂಕ ಖರ್ಗೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ; CM ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್ : ಸಚಿವ ಪ್ರಿಯಾಂಕ ಖರ್ಗೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ; CM ಸಿದ್ದರಾಮಯ್ಯ

ಬೆಂಗಳೂರು : ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆಯವರು ರಾಜೀನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ. ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆಯವರು ರಾಜೀನಾಮೆ ನೀಡಬೇಕೆಂಬ ಪ್ರತಿಪಕ್ಷಗಳ ಒತ್ತಾಯ ರಾಜಕೀಯ ಪ್ರೇರಿತವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡಿರುವ ಬೀದರ್ ನ ಗುತ್ತಿಗೆದಾರನ ಡೆತ್ ನೋಟ್ ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆಯವರ ಹೆಸರಿಲ್ಲ. ಈ ಪ್ರಕರಣದಲ್ಲಿ ಅವರ ಪಾತ್ರವಾಗಲಿ, ಸಾಕ್ಷ್ಯವಾಗಲಿ ಇಲ್ಲ. ಆದ್ದರಿಂದ ರಾಜೀನಾಮೆ ಕೊಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಆದಾಗ್ಯೂ ಯಾವುದೇ ವಿಚಾರಣೆಗೆ ತಾನು ಸಿದ್ಧವಿರುವುದಾಗಿ ಸಚಿವರು ತಿಳಿಸಿದ್ದಾರೆ.

ಪ್ರಕರಣದ ಸಂಬಂಧ ದಾಖಲಾಗಿರುವ ದೂರಿನ ತನಿಖೆಯನ್ನು ಸಿಐಡಿ ಗೆ ವಹಿಸಲಾಗಿದ್ದು, ವರದಿ ಬಂದ ನಂತರ ಸೂಕ್ತ ಕ್ರಮಕೈಗೊಳ್ಳಲಾಗುವುದು. ಬಿಜೆಪಿಯವರು ಈ ಪ್ರಕರಣದ ತನಿಖೆಯನ್ನು ಸಿಬಿಐ ಗೆ ವಹಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ರಾಜ್ಯದ ಪೊಲೀಸರ ಬಗ್ಗೆ ಬಿಜೆಪಿಯವರಿಗೆ ನಂಬಿಕೆಯಿಲ್ಲವೇ? ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಒಂದೇ ಒಂದು ಪ್ರಕರಣವನ್ನೂ ಸಿಬಿಐಗೆ ವಹಿಸಿರಲಿಲ್ಲ. ಆದ್ದರಿಂದ ಸಿಬಿಐಗೆ ತನಿಖೆ ವಹಿಸಬೇಕೆಂಬ ಬೇಡಿಕೆ ಮುಂದಿರಿಸಲು ಬಿಜೆಪಿಯವರಿಗೆ ನೈತಿಕತೆ ಇಲ್ಲ. ಎಂಎಲ್ಸಿ ಸಿ.ಟಿ ರವಿಯವರ ಪ್ರಕರಣವನ್ನೂ ಸಿಐಡಿಗೆ ವಹಿಸಲಾಗಿದೆ. ಅವಾಚ್ಯ ಪದಬಳಕೆ ಆಗಿದೆಯಾ? ಇಲ್ಲವಾ? ಎಂಬ ಬಗ್ಗೆ ಎಫ್ ಎಸ್ ಎಲ್ ವರದಿ ಬರಲಿದೆ. ಮಹಿಳಾ ಸಚಿವರಿಗೆ ಅವಹೇಳನ ಮಾಡಿರುವ ಆರೋಪವಿದ್ದು, ಸಿ.ಟಿ.ರವಿಯವರ ಮೇಲೆ ದೂರು ದಾಖಲಾಗಿದೆ. ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಸಂಪುಟ ವಿಸ್ತರಣೆ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...