ಬೆಂಗಳೂರು: ಕಲಬುರಗಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಚಿನ್ ನಿವಾಸಕ್ಕೆ ಭಾನುವಾರ ಬಿಜೆಪಿ ನಿಯೋಗ ಭೇಟಿ ನೀಡಲಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದ ನಿಯೋಗ ತೆರಳಿ ಮೃತ ಸಚಿನ್ ಕುಟುಂಬದವರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಲಿದ್ದಾರೆ. ನಿಯೋಗದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಹಾಗೂ ಕಲಬುತಗಿ ಭಾಗದ ಬಿಜೆಪಿ ಶಾಸಕರು, ಮುಖಂಡರು ಸಾಥ್ ನೀಡಲಿದ್ದಾರೆ. ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್ ಸೇರಿ 6 ಮಂದಿ ವಿರುದ್ಧ ಕಲಬುರಗಿ ಸ್ಟೇಷನ್ ಬಜಾರ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.