
ಬೆಂಗಳೂರು: ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡಲು ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ಮಾಹಿತಿ ನೀಡಿ, ಸಂಪುಟ ಸಭೆಯಲ್ಲಿ ಚರ್ಚಿಸಿ ಸುಗ್ರೀವಾಜ್ಞೆ ಜಾರಿ ಮಾಡುತ್ತೇವೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಅಂಗೀಕಾರವಾಗಿದೆ. ವಿಧಾನ ಪರಿಷತ್ ನಲ್ಲಿ ವಿಧೇಯಕ ಅಂಗೀಕಾರ ಆಗಿರಲಿಲ್ಲ. ಹಾಗಾಗಿ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿದ ನಂತರ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡಲಾಗುವುದು ಎಂದು ಹೇಳಿದ್ದಾರೆ.