ಬೆಂಗಳೂರು: ವಿಧಾನ ಪರಿಷತ್ ನಲ್ಲಿ ಇಂದು ಕರಾಳ ದಿನವಾಗಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಮತಾಂತರ ನಿಷೇಧ ವಿಧೇಯಕವನ್ನು ಪಾಸ್ ಮಾಡಿಕೊಂಡಿದ್ದಾರೆ. ಕರಾಳ ಕಾನೂನಿಗೆ ತಿದ್ದುಪಡಿ ಮಾಡಿ ಸಂಖ್ಯಾಬಲದ ಮೇಲೆ ಪಾಸ್ ಮಾಡಲಾಗಿದೆ. ಸಂವಿಧಾನದ ಆಶಯಗಳು, ಸಿದ್ಧಾಂತ ಗಾಳಿಗೆ ತೂರಲಾಗಿದೆ. ಮತಾಂತರ ನಿಷೇಧ ವಿಧೇಯಕ ಮಂಡಿಸಿ ಅಂಗೀಕಾರ ಮಾಡಿದ್ದಾರೆ ಎಂದರು.
ನಮ್ಮ ಯಾವುದೇ ಪ್ರಶ್ನೆಗೆ ಸರಿಯಾದ ಅಂಕಿ ಅಂಶಗಳಿಲ್ಲ. ನಾಗ್ಪುರ ವಿವಿಯಿಂದ ಬಂದ ಸುಳ್ಳು ಮಾಹಿತಿ ಹಂಚಿಕೆ ಮಾಡಿದ್ದಾರೆ. ಹಾಗಾಗಿ ಬಿಲ್ ಪ್ರತಿಯನ್ನು ಹರಿದು ಹಾಕಿ ಬಂದಿದ್ದೇವೆ. ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸುವ ಕಾಳಜಿ ಇಲ್ಲ. ಧರ್ಮಾಧಾರಿತ ರಾಷ್ಟ್ರ ಮಾಡಲು ಹೊರಟಿದ್ದಾರೆ ಎಂದು ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.