ಶಿವಮೊಗ್ಗ: ಆಮಿಷ ವಡ್ಡಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುತ್ತಿರುವ ಆರೋಪ ಹಿನ್ನೆಲೆಯಲ್ಲಿ ಪಾದ್ರಿ ಮನೆಗೆ ಬಜರಂಗದಳ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಶಿವಮೊಗ್ಗದ ಗೋಪಿಶೆಟ್ಟಿಕೊಪ್ಪದಲ್ಲಿ ಘಟನೆ ನಡೆದಿದೆ.
ಆಮಿಷವೊಡ್ಡಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಲು ಮುಂದಾಗಿ ಪ್ರಾರ್ಥನೆ ನಡೆಸಲಾಗುತ್ತಿತ್ತು ಎಂದು ಹೇಳಲಾಗಿದೆ. ಮನೆಯೊಂದರಲ್ಲಿ ಹಿಂದೂಗಳನ್ನು ಕರೆಸಿ ಸಾಮೂಹಿಕ ಪ್ರಾರ್ಥನೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ತಿಳಿದ ಬಜರಂಗದಳ ಕಾರ್ಯಕರ್ತರು ಮನೆಗೆ ಮುತ್ತಿಗೆ ಹಾಕಿದ್ದಾರೆ. ಪಾದ್ರಿ ಮಣಿಕಂಠ ಎಂಬುವರು ಪ್ರಾರ್ಥನೆ ನಡೆಸುತ್ತಿದ್ದರು. ಹಿಂದೂಗಳಿಗೆ ಬೈಬಲ್ ನೀಡಿ ಪ್ರಾರ್ಥನೆ ಮಾಡಿಸಲಾಗುತ್ತಿತ್ತು ಎಂದು ಹೇಳಲಾಗಿದೆ. ಬಜರಂಗದಳ ಕಾರ್ಯಕರ್ತರು ಮನೆಗೆ ಮುತ್ತಿಗೆ ಹಾಕಿದ ಮಾಹಿತಿ ತಿಳಿದ ತುಂಗಾ ನಗರ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.