alex Certify Monsoon Rain : ಚುರುಕಾದ ಮುಂಗಾರು : ಕೂಲ್..ಕೂಲ್ ಆಯ್ತು ಸಿಲಿಕಾನ್ ಸಿಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Monsoon Rain : ಚುರುಕಾದ ಮುಂಗಾರು : ಕೂಲ್..ಕೂಲ್ ಆಯ್ತು ಸಿಲಿಕಾನ್ ಸಿಟಿ

ಬೆಂಗಳೂರು : ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ಇಂದು ಮುಂಗಾರು ಚುರುಕಾಗಿದ್ದು, ತುಂತುರು ಮಳೆ ಶುರುವಾಗಿದೆ.

ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಮಳೆ ಸುರಿಯುತ್ತಿದ್ದು, ಸಿಲಿಕಾನ್ ಸಿಟಿ ಕೂಲ್ ಆಗಿದೆ. ಬೆಳ್ಳಂ ಬೆಳಗ್ಗೆ ಮಳೆ ಹಿನ್ನೆಲೆ ಜನರು ವಾಕಿಂಗ್ ಹೋಗದೇ ಮನೆಯಲ್ಲೇ ಇದ್ದರು.ರಾಜ್ಯದಲ್ಲಿ ದುರ್ಬಲಗೊಂಡಿದ್ದ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ಒಳನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಮುನ್ಸೂಚನೆಯಿದೆ. ಬೆಂಗಳೂರಿನ ಕೆಲವು ಪ್ರದೇಶದಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ತುಮಕೂರು, ಹಾಸನ, ಚಾಮರಾಜನಗರ ಹಾಗೂ ಮೈಸೂರಿನಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ತುಮಕೂರು, , ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...