
ಬೆಂಗಳೂರು: ಸಹಕಾರಿ ಬ್ಯಾಂಕುಗಳಲ್ಲಿ ಕೃಷಿ ಚಟುವಟಿಕೆಗಳಿಗೆ ಪಡೆದ ಸಾಲ ಮನ್ನಾ ಮಾಡುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದು, ರೈತರು ಇಡುವ ಠೇವಣಿ ಹಣದ ಮೇಲೆ ಸಹಕಾರಿ ಬ್ಯಾಂಕುಗಳು ನಡೆಯುತ್ತವೆ. ಹೀಗಿರುವಾಗ ಸಾಲ ಮನ್ನಾ ಮಾಡುವ ಉದ್ದೇಶವಿಲ್ಲ. ಸಾಲಮನ್ನಾ ಮಾಡುವುದಾಗಿ ಆಯವ್ಯಯದಲ್ಲಿ ಕೂಡ ಘೋಷಣೆ ಮಾಡಿಲ್ಲವೆಂದು ತಿಳಿಸಿದ್ದಾರೆ.
2024 -25 ನೇ ಸಾಲಿನಲ್ಲಿ 35.10 ಲಕ್ಷ ರೈತರಿಗೆ 25000 ಕೋಟಿ ರೂಪಾಯಿಗಳ ಅಲ್ಪಾವಧಿ ಸಾಲ ನೀಡಲಾಗಿದೆ. 90 ಸಾವಿರ ರೈತರಿಗೆ 2000 ಕೋಟಿ ರೂಪಾಯಿ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಾಲ ವಿತರಿಸುವ ಗುರಿ ಹೊಂದಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.