ತುಮಕೂರು: ಸಹಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಕೆಳಹಂತದ ನೌಕರರಿಗೆ ಸೇವಾ ಭದ್ರತೆ ಕಲ್ಪಿಸಲು ಸಹಕಾರ ಕಾಯ್ದೆಗೆ ತಿದ್ದುಪಡಿ ತರಲಾಗುವುದು.
ಸಹಕಾರ ಸಚಿವ ಕೆ.ಎನ್. ರಾಜಣ್ಣ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ತುಮಕೂರಿನಲ್ಲಿ ಶುಕ್ರವಾರ ಆಯೋಜಿಸಿದ್ದ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಮತ್ತು ಹಾಲು ಸಂಗ್ರಹ ಕೇಂದ್ರಗಳಿಗೆ ಹೊಸ ತಂತ್ರಾಂಶ ಅಳವಡಿಕೆ ಮತ್ತು ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಹಕಾರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಕೆಳಹಂತದ ನೌಕರರಿಗೆ ಸೇವಾ ಭದ್ರತೆ ಒದಗಿಸುವ ಬಗ್ಗೆ ಸಹಕಾರ ತಿದ್ದುಪಡಿ ಕಾಯ್ದೆಯಲ್ಲಿ ಪ್ರಸ್ತಾಪಿಸಲಾಗಿದೆ. ಕಾಯ್ದೆ ಜಾರಿಯಾದರೆ ರಾಜ್ಯದ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ನೌಕರರಿಗೆ ಭದ್ರತೆ ದೊರೆಯಲಿದೆ ಎಂದು ಹೇಳಿದ್ದಾರೆ.