ವಿಧಾನ ಪರಿಷತ್ ನಲ್ಲಿ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕಕ್ಕೆ ಹಿನ್ನಡೆ: ಪರಿಶೀಲನಾ ಸಮಿತಿ ರಚನೆಗೆ ನಿರ್ಧಾರ

ಬೆಂಗಳೂರು: ಸಹಕಾರ ಸಂಘಗಳಿಗೆ ಮೀಸಲು ಆಧಾರಿತವಾಗಿ ರಾಜ್ಯ ಸರ್ಕಾರದಿಂದ ಮೂವರನ್ನು ನಾಮ ನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡಲು ಅವಕಾಶ ಕಲ್ಪಿಸುವುದು ಸೇರಿ ಹಲವು ಬದಲಾವಣೆ ಒಳಗೊಂಡ ಕರ್ನಾಟಕ ಸೌಹಾರ್ದ ಸಹಕಾರಿ(ತಿದ್ದುಪಡಿ) ವಿಧೇಯಕ -2024ಕ್ಕೆ ವಿಧಾನ ಪರಿಷತ್ ನಲ್ಲಿ ಹಿನ್ನಡೆಯಾಗಿದೆ.

ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದ್ದ ಕರ್ನಾಟಕ ಸೌಹಾರ್ದ ಸಹಕಾರಿ(ತಿದ್ದುಪಡಿ) ವಿಧೇಯಕಕ್ಕೆ ವಿಧಾನಪರಿಷತ್ ನಲ್ಲಿ ಹಿನ್ನಡೆಯಾಗಿದ್ದು, ಪರಿಶೀಲನಾ ಸಮಿತಿ ರಚನೆಗೆ ನಿರ್ಧರಿಸಲಾಗಿದೆ. ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಪರಿಷತ್ ನನಲ್ಲಿ ವಿಧೇಯಕ ಮಂಡಿಸಿದ್ದು, ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ಭಾರಿ ಚರ್ಚೆಯೇ ನಡೆದಿದೆ.

ಪರಿಶೀಲನಾ ಸಮಿತಿ ರಚನೆಗೆ ವಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಬಿಗಿಪಟ್ಟು ಹಿಡಿದಿದ್ದಾರೆ. ಕೆಳಮನೆಯಲ್ಲಿ ಅಂಗೀಕಾರವಾದ ವಿಧೇಯಕವನ್ನು ಮೇಲ್ಮನೆಯಲ್ಲಿ ಅಂಗೀಕರಿಸುವಂತೆ ಕಾಂಗ್ರೆಸ್ ಸದಸ್ಯರೊಂದಿಗೆ ಕೆ.ಎನ್. ರಾಜಣ್ಣ ಮನವಿ ಮಾಡಿದ್ದು, ಅಂತಿಮವಾಗಿ ಉಪಸಭಾಪತಿ ಪ್ರಾಣೇಶ್ ಪ್ರಸ್ತಾವನೆಯನ್ನು ಮತಕ್ಕೆ ಹಾಕಿದ್ದಾರೆ.

ವಿಧೇಯಕದ ಬಗ್ಗೆ ಪರಿಶೀಲನಾ ಸಮಿತಿ ರಚನೆಗೆ ಬಿಜೆಪಿ ಸದಸ್ಯರು ಬೆಂಬಲ ಸೂಚಿಸಿದ್ದು, ರಚನೆ ಪರವಾಗಿ ಒಟ್ಟು 33 ಮತಗಳು ಚಲಾವಣೆಯಾಗಿದೆ. ಸಮಿತಿ ರಚನೆ ವಿರುದ್ಧ 21 ಮತಗಳು ಬಿದ್ದಿವೆ. ಬಿಜೆಪಿ ಸದಸ್ಯ ಹೆಚ್. ವಿಶ್ವನಾಥ್ ತಟಸ್ಥರಾಗಿದ್ದಾರೆ. ಪರಿಶೀಲನಾ ಸಮಿತಿ ರಚನೆ ಪರ 33 ಮತಗಳು ಬಂದ ಹಿನ್ನೆಲೆಯಲ್ಲಿ ಕರ್ನಾಟಕ ಸೌಹಾರ್ದ ಸಹಕಾರಿ(ತಿದ್ದುಪಡಿ) ವಿಧೇಯಕ ಪರಿಶೀಲನಾ ಸಮಿತಿ ರಚನೆಗೆ ನಿರ್ಧಾರ ಕೈಗೊಳ್ಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read