alex Certify BIG SHOCKING NEWS: ದೂರು ನೀಡಲು ಬಂದ ಮಹಿಳೆ ಮೇಲೆ ಪೊಲೀಸ್ ಅಧಿಕಾರಿಯಿಂದಲೇ ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING NEWS: ದೂರು ನೀಡಲು ಬಂದ ಮಹಿಳೆ ಮೇಲೆ ಪೊಲೀಸ್ ಅಧಿಕಾರಿಯಿಂದಲೇ ಅತ್ಯಾಚಾರ

ಪೊಲೀಸ್ ಅಧಿಕಾರಿಯೊಬ್ಬ ದೂರು ನೀಡಲು ಬಂದ ಮಹಿಳೆ ಮೇಲೆಯೇ ತನ್ನ ಮನೆಯಲ್ಲಿ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮಹಿಳೆ ದೂರಿನ ಬಳಿಕ ಆ ಅಧಿಕಾರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಪ್ರಕರಣದ ವಿವರ: ಈ ಘಟನೆ ಕನೋಜ್ ನಗರದ ಪೊಲೀಸ್ ಠಾಣೆಯಲ್ಲಿ ನಡೆದಿದ್ದು, ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ನಡೆದ ಅತ್ಯಾಚಾರದ ಕುರಿತು ದೂರು ನೀಡಲು ಮಹಿಳೆಯೊಬ್ಬರು ಠಾಣೆಗೆ ಬಂದಿದ್ದರು. ಈ ವೇಳೆ ಠಾಣಾಧಿಕಾರಿ ಅನುಪ್ ಕುಮಾರ್ ಮೌರ್ಯ ತನ್ನನ್ನು ಪ್ರತ್ಯೇಕವಾಗಿ ಭೇಟಿಯಾಗುವಂತೆ ಆಕೆಗೆ ತಿಳಿಸಿದ್ದಾನೆ.

ಅನುಪ್ ಕುಮಾರ್ ಮೌರ್ಯ ಹೇಳಿದಂತೆ ಸಂತ್ರಸ್ತೆ ಆತನ ಮನೆಗೆ ಹೋದ ಸಂದರ್ಭದಲ್ಲಿ ಅತ್ಯಾಚಾರವೆಸಗಿರುವುದಾಗಿ ಆರೋಪಿಸಲಾಗಿದೆ. ಇದೀಗ ಮಹಿಳೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಿದ್ದು, ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...