ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿಯಲ್ಲಿ ಪೊಲೀಸ್ ಹುತಾತ್ಮರಾಗಿದ್ದು, ಸಿ.ಆರ್.ಪಿ.ಎಫ್. ಸಿಬ್ಬಂದಿ ಗಾಯಗೊಂಡಿದ್ದಾರೆ.
ಪುಲ್ವಾಮಾ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳ ತಂಡದ ಮೇಲೆ ಉಗ್ರರು ದಾಳಿ ನಡೆಸಿದ್ದು, ಪೊಲೀಸ್ ಹುತಾತ್ಮರಾಗಿದ್ದಾರೆ. ಗಾಯಾಳು ಸಿ.ಆರ್.ಪಿ.ಎಫ್. ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರ ಜಿಲ್ಲೆಯ ಪಿಂಗ್ಲಾನಾ ಪ್ರದೇಶದಲ್ಲಿ ಈ ದಾಳಿ ನಡೆದಿದೆ. ಪುಲ್ವಾಮಾದ ಪಿಂಗ್ಲಾನಾದಲ್ಲಿ ಸಿಆರ್ಪಿಎಫ್ ಮತ್ತು ಪೊಲೀಸರ ಜಂಟಿ ಪಡೆ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.