alex Certify ರಕ್ಷಣೆ ಕೇಳಲು ಬಂದಿದ್ದ ಸಲ್ಮಾನ್ ಖಾನ್ ಜೊತೆಗೆ ಸೆಲ್ಫಿ ಕ್ಲಿಕ್ಕಿಸಲು ಮುಗಿಬಿದ್ದ ಮುಂಬೈ ಪೊಲೀಸ್….! ವಿಡಿಯೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಕ್ಷಣೆ ಕೇಳಲು ಬಂದಿದ್ದ ಸಲ್ಮಾನ್ ಖಾನ್ ಜೊತೆಗೆ ಸೆಲ್ಫಿ ಕ್ಲಿಕ್ಕಿಸಲು ಮುಗಿಬಿದ್ದ ಮುಂಬೈ ಪೊಲೀಸ್….! ವಿಡಿಯೋ ವೈರಲ್

ಶುಕ್ರವಾರದಂದು ಖ್ಯಾತ ಬಾಲಿವುಡ್ ನಟ ಸಲ್ಮಾನ್ ಖಾನ್ ಮುಂಬೈ ಪೊಲೀಸ್ ಕಮೀಷನರ್ ವಿವೇಕ್ ಪಾನ್ಸಲ್ಕರ್ ಅವರನ್ನು ಭೇಟಿ ಮಾಡಿದ್ದರು. ಸಂಜೆ 4:00 ಸುಮಾರಿಗೆ ಕ್ರಾಫರ್ಡ್ ಮಾರ್ಕೆಟ್ ಎದುರಿಗಿರುವ ಮುಂಬೈ ಪೊಲೀಸ್ ಮುಖ್ಯ ಕಚೇರಿಗೆ ಆಗಮಿಸಿದ್ದ ಅವರು ಬಳಿಕ ಪೊಲೀಸ್ ಕಮಿಷನರ್ ಅವರನ್ನು ಭೇಟಿಯಾಗಿದ್ದಾರೆ.

ತಮ್ಮ ಈ ಭೇಟಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಲ್ಮಾನ್ ಖಾನ್, ಇದೊಂದು ಸೌಜನ್ಯದ ಭೇಟಿ ಇದರಲ್ಲಿ ಯಾವುದೇ ವಿಶೇಷವಿಲ್ಲ ಎಂದು ಹೇಳಿದ್ದಾರೆ. ಆದರೆ ಮೂಲಗಳ ಪ್ರಕಾರ ಲಾರೆನ್ಸ್ ಬಿಷ್ಣೊಯ್ ಗ್ಯಾಂಗ್ ನಿಂದ ಜೀವ ಬೆದರಿಕೆ ಎದುರಿಸುತ್ತಿರುವ ಸಲ್ಮಾನ್ ಈ ಹಿನ್ನೆಲೆಯಲ್ಲಿ ಕಮೀಷನರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಇದೇ ವೇಳೆ ಸಹಾಯಕ ಕಮಿಷನರ್ ವಿಶ್ವಾಸ್ ನಾಂಗ್ರೆ ಪಾಟೀಲ್ ಅವರನ್ನೂ ಸಲ್ಮಾನ್ ಖಾನ್ ಭೇಟಿಯಾಗಿದ್ದಾರೆ. ಈ ಭೇಟಿ ಬಳಿಕ ಅವರು ಹೊರಬಂದ ವೇಳೆ ಸಲ್ಮಾನ್ ಖಾನ್ ಜೊತೆ ಸೆಲ್ಫಿ ತೆಗೆಸಿಕೊಳ್ಳಲು ಪೊಲೀಸ್ ಸಿಬ್ಬಂದಿ ಮುಗಿಬಿದ್ದಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...