alex Certify ಪರೀಕ್ಷೆಯಲ್ಲಿ ಉತ್ತರ ಸಿದ್ದಪಡಿಸಿ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಕರಿಸಿದ 16 ಶಿಕ್ಷಕರು ಸಸ್ಪೆಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪರೀಕ್ಷೆಯಲ್ಲಿ ಉತ್ತರ ಸಿದ್ದಪಡಿಸಿ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಕರಿಸಿದ 16 ಶಿಕ್ಷಕರು ಸಸ್ಪೆಂಡ್

ಬೀದರ್: ಜವಾಬ್ದಾರಿ ಅರಿಯದೇ ಪರೀಕ್ಷೆಯಲ್ಲಿ ಉತ್ತರ ಸಿದ್ದಪಡಿಸಿ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಕರಿಸಿದ 16 ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

ಪರೀಕ್ಷೆ ನಿಯಮಗಳನ್ನು ಪಾಲಿಸದೇ ಎಸ್ಎಸ್ಎಲ್ಸಿ ಇಂಗ್ಲಿಷ್ ವಿಷಯದ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಕರಿಸಲಾಗಿದೆ. ತಮ್ಮ ಜವಾಬ್ದಾರಿಯನ್ನು ತಿಳಿಯದೇ ಖುದ್ದಾಗಿ ಮಕ್ಕಳಿಗೆ ಪ್ರಶ್ನೆ ಪತ್ರಿಕೆಗೆ ಉತ್ತರ ಸಿದ್ದಪಡಿಸಿ ನೀಡಿದ ಆರೋಪದ ಹಿನ್ನೆಲೆಯಲ್ಲಿ 16 ಶಿಕ್ಷಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದ್ದು, ಪರೀಕ್ಷೆ ಕಾರ್ಯ ನಿರ್ವಹಿಸಿದ ಎಲ್ಲಾ ಶಿಕ್ಷಕರ ವಿಚಾರಣೆ ಕಾಯ್ದಿರಿಸಿ ಸೇವೆಯಿಂದ ಅಮಾನತು ಮಾಡಲಾಗಿದೆ.

ಶಿಕ್ಷಣ ಸಂಸ್ಥೆಗಳು ಸೂಚಿಸಿದ ಶಿಕ್ಷಕರು ಸಿಬ್ಬಂದಿಯನ್ನು ಅಮಾನತುಗೊಳಿಸಬೇಕು. ಇಲ್ಲವಾದಲ್ಲಿ ಕರ್ನಾಟಕ ಶಿಕ್ಷಣ ಕಾಯಿದೆ ಅನ್ವಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಡಿಪಿಐ ಎಚ್ಚರಿಕೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...