alex Certify BREAKING: ಗೂಡ್ಸ್ ರೈಲಿಗೆ ಎಕ್ಸ್ ಪ್ರೆಸ್ ರೈಲ್ ಡಿಕ್ಕಿ: ಅಪಘಾತದಲ್ಲಿ ಹಳಿತಪ್ಪಿದ 4 ಬೋಗಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಗೂಡ್ಸ್ ರೈಲಿಗೆ ಎಕ್ಸ್ ಪ್ರೆಸ್ ರೈಲ್ ಡಿಕ್ಕಿ: ಅಪಘಾತದಲ್ಲಿ ಹಳಿತಪ್ಪಿದ 4 ಬೋಗಿಗಳು

ಭುವನೇಶ್ವರ್: ಒಡಿಶಾದ ಬಾಲಸೋರ್ ನಲ್ಲಿ ರೈಲು ಅಪಘಾತ ಸಂಭವಿಸಿದೆ. ಸರಕು ಸಾಗಣೆ ರೈಲಿಗೆ ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದಿದೆ.

ಗೂಡ್ಸ್ ರೈಲಿಗೆ ಕೋರಮಂಡಲ್ ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದಿದೆ. ಬಾಲಸೋರ್ ಜಿಲ್ಲೆಯ ಬಹನಾಗ ರೈಲು ನಿಲ್ದಾಣದ ಸಮೀಪ ಘಟನೆ ನಡೆದಿದೆ. ಹಲವರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಿಕ್ಕಿಯ ರಭಸಕ್ಕೆ 4 ಬೋಗಿಗಳು ಹಳಿಯಿಂದ ಉರುಳಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಘಟನಾ ಸ್ಥಳಕ್ಕೆ ಹೆಚ್ಚಿನ ರಕ್ಷಣಾ ತಂಡಗಳು ಧಾವಿಸಿವೆ.

ಏತನ್ಮಧ್ಯೆ ಒಡಿಶಾದ ವಿಶೇಷ ಪರಿಹಾರ ಆಯುಕ್ತರ ಕಚೇರಿ, ತಂಡಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಸ್ಥಳಕ್ಕೆ ತೆರಳಿವೆ. ಬಾಲಸೋರ್ ಕಲೆಕ್ಟರ್ ಅವರಿಗೆ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲು ಮತ್ತು ಯಾವುದೇ ಹೆಚ್ಚುವರಿ ಸಹಾಯದ ಅಗತ್ಯವಿದ್ದರೆ SRC ಗೆ ತಿಳಿಸಲು ಸ್ಥಳಕ್ಕೆ ತಲುಪಲು ಸೂಚಿಸಲಾಗಿದೆ ಎಂದು ತಿಳಿಸಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...