ಕೋವಿಡ್-19 ಲಸಿಕೆಯ ಮುನ್ನೆಚ್ಚರಿಕೆ ಡೋಸ್ ಪಡೆಯದೇ ಉಳಿದಿರುವ 60 ವರ್ಷ ಮೇಲ್ಪಟ್ಟವರು, ಕಡಿಮೆ ರೋಗ ನಿರೋಧಕ ಶಕ್ತಿ ಉಳ್ಳವರು ಮತ್ತು ಈ ಹಿಂದೆ ಕೋವಿಡ್-19 ಲಸಿಕೆ ಪಡೆಯದೇ ಇರುವ ಆರೋಗ್ಯ ಕಾರ್ಯಕರ್ತೆಯರು ಮತ್ತು ಈ ಗುಂಪಿಗೆ ಸೇರಿದ ಫಲಾನುಭವಿಗಳು ಜಿಲ್ಲಾಸ್ಪತ್ರೆ ಅಥವಾ ತಾಲ್ಲೂಕು ಆಸ್ಪತ್ರೆಗಳಲ್ಲಿ ಕೋರ್ಬಿವ್ಯಾಕ್ಸ್ ಲಸಿಕೆ ಪಡೆದುಕೊಳ್ಳಬಹುದು.
ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಈಗಾಗಲೇ ಜಿಲ್ಲೆಯಲ್ಲಿ ಕೋವಿಡ್ – 19 ಲಸಿಕಾರಣ ಯಶಸ್ವಿಯಾಗಿ ಅನುಷ್ಟಾನಗೊಂಡಿದೆ. ಆದರೆ ಇತ್ತೀಚೆಗೆ ಕೆಲವು ರಾಜ್ಯಗಳಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್-19 ಮುನ್ನೆಚ್ಚರಿಕೆ ಡೋಸ್ ಪಡೆದೇ ಇರುವ ಫಲಾನುಭವಿಗಳು ಜಿಲ್ಲಾಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಪಡೆದುಕೊಳ್ಳಬೇಕು. ಜಿಲ್ಲೆಗೆ 820 ಡೋಸ್ ಕೋರ್ಬಿವ್ಯಾಕ್ಸ್ ಕೋವಿಡ್-19 ಲಸಿಕೆ ಸರಬರಾಜಾಗಿದ್ದು ಮುನ್ನೆಚ್ಚರಿಕೆ ಡೋಸ್ ಆಗಿ ಬಳಸಲು ಜಿಲ್ಲಾಧಿಕಾರಿಗಳು ಸೂಚಿಸಿರುತ್ತಾರೆ.
ಕೋರ್ಬಿವ್ಯಾಕ್ಸ್ ಕೋವಿಡ್-19 ಲಸಿಕೆಯನ್ನು ವಿಜಾತಿ(ಹೆಟೆರೊಲಾಗಸ್)ಮುನ್ನೆಚ್ಚರಿಕೆ ಡೋಸ್ ಆಗಿ ನೀಡಬಹುದಾಗಿರುತ್ತದೆ. ಆದ್ದರಿಂದ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆಯ 2 ಡೋಸ್ ಲಸಿಕೆ ಪಡೆದು 06 ತಿಂಗಳುಗಳು ಅಥವಾ 26 ವಾರಗಳನ್ನು ಪೂರೈಸಿದ 18 ವರ್ಷ ಮೇಲ್ಪಟ್ಟವರು ಮುನ್ನೆಚ್ಚರಕೆ ಡೋಸ್ ಲಸಿಕಾಕರಣಕ್ಕೆ ಬಾಕಿ ಇರುವ ಫಲಾನುಭವಿಗಳು ಕೋರ್ಬಿವ್ಯಾಕ್ಸ್ ಲಸಿಕೆ ಪಡೆಯಬಹುದಾಗಿರುತ್ತದೆ ಎಂದು ಶಿವಮೊಗ್ಗ ಡಿಹೆಚ್ಓ ಡಾ.ರಾಜೇಶ್ ಸುರಗಿಹಳ್ಳಿ ಹಾಗೂ ಆರ್ಸಿಹೆಚ್ ಅಧಿಕಾರಿ ಡಾ.ನಾಗರಾಜ್ನಾಯ್ಕ್ ತಿಳಿಸಿದ್ದಾರೆ.