ಬೆಂಗಳೂರು: ರಾಜ್ಯದ ಕೊರೊನಾ ಸೋಂಕು ಹೆಚ್ಚಾದಲ್ಲಿ ಶಾಲೆಗಳನ್ನು ಬಂದ್ ಮಾಡಲು ಸರ್ಕಾರ ಸಿದ್ಧವಿದೆ. ಆದರೆ, ಸದ್ಯಕ್ಕೆ ಅದು ಅನಗತ್ಯವೆಂದು ತಜ್ಞರು ಹೇಳಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ವಸತಿ ಶಾಲೆಗಳಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗುತ್ತದೆ. ಸೋಂಕು ತೀವ್ರತೆ ನೋಡಿಕೊಂಡು ಶಾಲೆಗಳನ್ನು ಬಂದ್ ಮಾಡುವ ಬಗ್ಗೆ ನಿರ್ಧರಿಸಲಾಗುವುದು ಎಂದರು.
ಶಾಲೆಗಳಲ್ಲಿ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆನ್ಲೈನ್ ಕ್ಲಾಸ್ ಮಾಡಬೇಕೆಂಬ ಒತ್ತಾಯ ಪೋಷಕರಿಂದ ಕೇಳಿಬಂದಿದೆ.
ಯಾರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ತಜ್ಞರ ವರದಿ ಪಡೆಯುತ್ತಿದ್ದೇವೆ. ವರದಿ ಆಧರಿಸಿ ಮಕ್ಕಳ ಹಿತದೃಷ್ಟಿಯಿಂದ ನಿರ್ಧಾರ ಕೈಗೊಳ್ಳಲಾಗುತ್ತದೆ. ಸೋಂಕು ಹೆಚ್ಚಾದರೆ ಶಾಲೆಗಳನ್ನು ಬಂದ್ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.