alex Certify BREAKING: ರಾಜ್ಯದಲ್ಲಿ ಕೊರೋನಾ ಭಾರಿ ಇಳಿಕೆ – ಇಂದು 662 ಜನರಿಗೆ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯದಲ್ಲಿ ಕೊರೋನಾ ಭಾರಿ ಇಳಿಕೆ – ಇಂದು 662 ಜನರಿಗೆ ಸೋಂಕು ದೃಢ

ಬೆಂಗಳೂರು:  ರಾಜ್ಯದಲ್ಲಿ ಇಂದು ಕೊರೋನಾ ಸೋಂಕು ಇಳಿಮುಖವಾಗಿದ್ದು, 662 ಜನರಿಗೆ ಪಾಸಿಟಿವ್ ರಿಪೋರ್ಟ್ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 9,17,571 ಕ್ಕೆ ಏರಿಕೆಯಾಗಿದೆ.

ಇವತ್ತು ರಾಜ್ಯದಲ್ಲಿ ನಾಲ್ಕು ಮಂದಿ ಕೊರೋನಾ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 12,074 ಜನ ಸಾವನ್ನಪ್ಪಿದ್ದಾರೆ. ಇಂದು 1344 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 8,93,617 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 11,861 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

ಬೆಂಗಳೂರಿನಲ್ಲಿ ಕೂಡ ಕೊರೋನಾ ಇಳಿಮುಖವಾಗಿದ್ದು, ಒಂದೇ ದಿನ 370 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,87,278 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಬ್ಬರು ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 4306 ಜನ ಸಾವನ್ನಪ್ಪಿದ್ದಾರೆ. ಇವತ್ತು ಬೆಂಗಳೂರಿನಲ್ಲಿ 843 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 3,75,221 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 7750 ಸಕ್ರಿಯ ಪ್ರಕರಣಗಳು ಇವೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...