alex Certify BIG NEWS: ರಾಜ್ಯದಲ್ಲಿಂದು ಕೊರೋನಾ ಇಳಿಕೆ; 233 ಜನರಿಗೆ ಸೋಂಕು, 6 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿಂದು ಕೊರೋನಾ ಇಳಿಕೆ; 233 ಜನರಿಗೆ ಸೋಂಕು, 6 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 233 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 6 ಜನ ಸೋಂಕಿತರು ಮೃತಪಟ್ಟಿದ್ದಾರೆ. 648 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 0.48 ರಷ್ಟು ಇದೆ. 3469 ಸಕ್ರಿಯ ಪ್ರಕರಣಗಳಿವೆ. ಒಟ್ಟು ಸೋಂಕಿತರ ಸಂಖ್ಯೆ 39,42,018 ಕ್ಕೆ ಏರಿಕೆಯಾಗಿದೆ. ಇದುವರೆಗೆ 39,985 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 38,98,576 ಜನ ಗುಣಮುಖರಾಗಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 163 ಜನರಿಗೆ ಸೋಂಕು ತಗುಲಿದ್ದು, ಇಬ್ಬರು ಮೃತಪಟ್ಟಿದ್ದಾರೆ. 331 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 2460 ಸಕ್ರಿಯ ಪ್ರಕರಣಗಳಿವೆ.

ಬಾಗಲಕೋಟೆ, ಬೀದರ್, ಚಿಕ್ಕಮಗಳೂರು, ಕೊಪ್ಪಳ, ರಾಮನಗರ, ವಿಜಯಪುರ ಜಿಲ್ಲೆಗಳಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ. ಉಳಿದ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ ಇಬ್ಬರು, ಧಾರವಾಡ, ಹಾಸನ, ತುಮಕೂರು, ವಿಜಯಪುರದಲ್ಲಿ ತಲಾ ಒಬ್ಬರು ಸೇರಿ ರಾಜ್ಯದಲ್ಲಿ 6 ಜನರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...