
ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 2479 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 4 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. 288 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಒಟ್ಟು ಸೋಂಕಿತರ ಸಂಖ್ಯೆ 30,13,326 ಕ್ಕೆ ಏರಿಕೆಯಾಗಿದೆ. ಇದುವರೆಗೆ 29,61,410 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 38,355 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 13,532 ಕ್ಕೆ ಏರಿಕೆಯಾಗಿದೆ. ಪಾಸಿಟಿವಿಟಿ ದರ ಶೇಕಡ 2.59 ರಷ್ಟು ಇದೆ.
ರಾಜಧಾನಿ ಬೆಂಗಳೂರಿನಲ್ಲಿ ಒಂದೇ ದಿನ 2053 ಹೊಸ ಕೇಸ್ ಗಳು ಪತ್ತೆಯಾಗಿದ್ದು, ಮೂವರು ಮೃತಪಟ್ಟಿದ್ದಾರೆ. 202 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 11,423 ಸಕ್ರಿಯ ಪ್ರಕರಣಗಳಿವೆ.
ಜಿಲ್ಲೆಗಳಲ್ಲಿಯೂ ಕೊರೊನಾ ಸೋಂಕು ತೀವ್ರ ಏರಿಕೆ ಕಂಡಿದೆ. ಬೆಳಗಾವಿ 45, ಬೆಂಗಳೂರು ಗ್ರಾಮಾಂತರ 15, ಬೆಂಗಳೂರು ನಗರ 2053, ದಕ್ಷಿಣಕನ್ನಡ 75, ಧಾರವಾಡ 29, ಹಾಸನ 18, ಕಲಬುರ್ಗಿ 16, ಕೋಲಾರ 14, ಮಂಡ್ಯ 17, ಮೈಸೂರು 48, ಉಡುಪಿ 72, ತುಮಕೂರು 11, ವಿಜಯಪುರ 11 ಹೊಸ ಕೇಸ್ ಗಳು ಪತ್ತೆಯಾಗಿವೆ. ಕಾವೇರಿ ಹೊರತುಪಡಿಸಿ ಎಲ್ಲ ಜಿಲ್ಲೆಗಳಲ್ಲಿಯೂ ಕೊರೋನಾ ಪ್ರಕರಣ ದಾಖಲಾಗಿದೆ. ಬೆಂಗಳೂರು ನಗರ 3, ದಕ್ಷಿಣಕನ್ನಡ 1 ಸೇರಿ ರಾಜ್ಯದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

