ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 365 ಜನರಿಗೆ ಕೊರೊನಾ ಸೋಂಕು ತಗುಲಿದೆ. 443 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 8 ಜನ ಸೋಂಕಿತರು ಮೃತಪಟ್ಟಿದ್ದಾರೆ.
ಒಟ್ಟು ಸೋಂಕಿತರ ಸಂಖ್ಯೆ 29,84,849 ಕ್ಕೆ ಏರಿಕೆಯಾಗಿದೆ. ಇದುವರೆಗೆ 37,984 ಜನ ಮೃತಪಟ್ಟಿದ್ದು. 29,37,848 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 8988 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 0.31 ರಷ್ಟಿದೆ.
ರಾಜಧಾನಿ ಬೆಂಗಳೂರಿನಲ್ಲಿ 210 ಜನರಿಗೆ ಸೋಂಕು ತಗುಲಿದ್ದು, ನಾಲ್ವರು ಮೃತಪಟ್ಟಿದ್ದಾರೆ. 220 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 6746 ಸಕ್ರಿಯ ಪ್ರಕರಣಗಳಿವೆ.
ಜಿಲ್ಲಾವಾರು ಮಾಹಿತಿ:
ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 0, ಬೀದರ್ 0, ಚಿಕ್ಕಬಳ್ಳಾಪುರ 1, ಚಿತ್ರದುರ್ಗ 1, ಧಾರವಾಡ 1, ಗದಗ 0, ಹಾವೇರಿ 0, ಕಲಬುರಗಿ 1, ಕೊಪ್ಪಳ 0, ರಾಯಚೂರು 0, ರಾಮನಗರ 0, ವಿಜಯಪುರ 0, ಯಾದಗಿರಿ 0, ಬೆಂಗಳೂರು ನಗರ 210, ದಕ್ಷಿಣಕನ್ನಡ 33, ಹಾಸನ 33 ಹೊಸ ಪ್ರಕರಣ ವರದಿಯಾಗಿದೆ.
ಮೃತಪಟ್ಟವರ ಸಂಖ್ಯೆ:
ಬೆಂಗಳೂರು ನಗರ 4, ದಕ್ಷಿಣಕನ್ನಡ 1, ಧಾರವಾಡ 1, ಶಿವಮೊಗ್ಗ 1, ತುಮಕೂರು 1 ಸೇರಿದಂತೆ ರಾಜ್ಯದಲ್ಲಿ 8 ಜನ ಸೋಂಕಿತರು ಮೃತಪಟ್ಟಿದ್ದಾರೆ.